ಭಾರಿ ಮಳೆ: ಕುಕ್ಕೆ ಸುಬ್ರಹ್ಮಣ್ಯ ಕುಮಾರಧಾರ ಸ್ನಾನಘಟ್ಟ ಮುಳುಗಡೆಘಟ್ಟ ಪ್ರದೇಶಗಳಲ್ಲಿ ಭಾರೀ ಮಳೆಯಿಂದ ಕುಮಾರಧಾರ ಉಕ್ಕಿ ಹರಿಯುತ್ತಿದ್ದು, ಸ್ನಾನಘಟ್ಟದ ಭಕ್ತರ ಶೌಚ ಗೃಹ, ಭಕ್ತರ ಲಗೇಜ್ ಕೊಠಡಿಯೂ ಭಾಗಶಃ ಮುಳುಗಡೆಯಾಗಿದೆ. ಸುಬ್ರಹ್ಮಣ್ಯ-ಪುತ್ತೂರು-ಮಂಜೇಶ್ವರ ರಾಜ್ಯ ಹೆದ್ದಾರಿಯಲ್ಲಿ ಹರಿಯುತ್ತಿರುವ ನದಿ ನೀರಿನಿಂದಾಗಿ ಹೆದ್ದಾರಿಯಲ್ಲಿ ವಾಹನ ಸಂಚಾರ ಸ್ಥಗಿತವಾಗಿದೆ.