ಬೆಳ್ತಂಗಡಿ ಕ್ಷೇತ್ರದಲ್ಲಿ ಬೃಜೇಶ್ ಚೌಟ ಚುನಾವಣಾ ಪ್ರಚಾರ ಸಂಚಾರದಕ್ಷಿಣ ಕನ್ನಡ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬ್ರಿಜೇಶ್ ಚೌಟ ಭಾನುವಾರ ಬೆಳ್ತಂಗಡಿ ವಿಧಾನಸಭಾ ಕ್ಷೇತ್ರದಲ್ಲಿ ಚುನಾವಣಾ ಪ್ರವಾಸ ನಡೆಸಿದರು. ಶಾಸಕ ಹರೀಶ್ ಪೂಂಜ ಅವರೊಂದಿಗೆ ವೇಣೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನಕ್ಕೆ ಭೇಟಿ ನೀಡಿ ದೇವರ ದರ್ಶನ ಪಡೆದು , ಹೊಸಂಗಡಿ ಪಡ್ಯಾರಬೆಟ್ಟು ಕೊಡಮಣಿತ್ತಾಯ ದೈವಸ್ಥಾನಕ್ಕೆ ಭೇಟಿ ನೀಡಿ ದರ್ಶನ ಪಡೆದರು.