ತುಳು ಅಧಿಕೃತ ಭಾಷೆ: ಶೀಘ್ರ ಕ್ರಮಕ್ಕೆ ಒತ್ತಾಯ ವಿಧಾನ ಸೌಧದಲ್ಲಿ ರಾಜ್ಯ ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವರು ಆಯೋಜಿಸಿದ್ದ ಎಲ್ಲ ಅಕಾಡೆಮಿ ಹಾಗೂ ಪ್ರಾಧಿಕಾರದ ಅಧ್ಯಕ್ಷರು ಹಾಗೂ ಸದಸ್ಯರ ಸಭೆಯಲ್ಲಿ ಭಾಗವಹಿಸಿದ್ದ ತುಳು ಸಾಹಿತ್ಯ ಅಕಾಡೆಮಿ ಅಧ್ಯಕ್ಷ ತಾರಾನಾಥ್ ಗಟ್ಟಿ ಕಾಪಿಕಾಡ್ ಅವರು ತುಳು ಭಾಷೆಯನ್ನು ರಾಜ್ಯದ ಎರಡನೇ ಅಧಿಕೃತ ಭಾಷೆಯಾಗಿ ಘೋಷಿಸಲು ಶೀಘ್ರ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು.