ಗ್ಯಾರಂಟಿ ಯೋಜನೆ ಜಾರಿಗೊಳಿಸಿ ಕೊಟ್ಟ ಮಾತಿನಂತೆ ನಡೆದುಕೊಂಡ ಸರ್ಕಾರಚುನಾವಣೆ ಸಂದರ್ಭ ಐದು ಗ್ಯಾರಂಟಿಯನ್ನು ಕಾಂಗ್ರೆಸ್ ನೀಡಿತ್ತು. ಅಧಿಕಾರಕ್ಕೆ ಬಂದ ಮೂರು ತಿಂಗಳಲ್ಲೇ ನಾಲ್ಕು ಗ್ಯಾರಂಟಿಯನ್ನು ಅನುಷ್ಠಾನಗಳಿಸಿದೆ. ಅದೇ ರೀತಿ ಐದನೇ ಯೋಜನೆಯಾದ ಯುವನಿಧಿಯೂ ಈಗ ಅನುಷ್ಠಾನವಾಗಿದ್ದು, ಸರ್ಕಾರ ತನ್ನ ಮಾತು ಉಳಿಸಿಕೊಂಡಿದೆ. ಮುಖ್ಯಮಂತ್ರಿ ನುಡಿದಂತೆ ನಡೆದಿದ್ದಾರೆ ಎಂದು ಹರೀಶ್ ಕುಮಾರ್ ಹೇಳಿದರು.