ಧರ್ಮ ಅವಹೇಳನ: ಖಾಸಗಿ ಶಾಲೆ ಶಿಕ್ಷಕಿ ವಜಾಕೆಲ ದಿನಗಳ ಹಿಂದೆ ಮಂಗಳೂರಿನ ಖಾಸಗಿ ಶಿಕ್ಷಣ ಸಂಸ್ಥೆ ಶಿಕ್ಷಕಿ ಅಯೋಧ್ಯೆ ರಾಮಮಂದಿರ ಮತ್ತು ಶ್ರೀರಾಮ ದೇವರ ಬಗ್ಗೆ ಅವಹೇಳನ ಮಾಡಿದ್ದಾರೆ ಎಂದು ವಿದ್ಯಾರ್ಥಿಗಳು ಪೋಷಕರಲ್ಲಿ ತಿಳಿಸಿದ್ದರು. ನಂತರ ಇದು ವಿವಾದದ ಸ್ವರೂಪ ಪಡೆದುಕೊಂಡಿದ್ದು, ಹಿಂದೂ ಸಂಘಟನೆಗಳು, ರಾಜಕೀಯ ಮುಖಂಡರು, ಪೋಷಕರು ಆಕ್ರೋಶ ವ್ಯಕ್ತಪಡಿಸಿ ಶಿಕ್ಷಕಿ ವಿರುದ್ಧ ಕ್ರಮಕ್ಕೆ ಆಗ್ರಹಿಸಿದ್ದರು. ಈ ಹಿನ್ನೆಲೆಯಲ್ಲಿ ಸೋಮವಾರ ಅವರನ್ನು ವಜಾ ಮಾಡಲಾಗಿದೆ.