ಬಂಡಾಯ ಸ್ಪರ್ಧೆಯಿಂದ ವ್ಯತಿರಿಕ್ತ ಪರಿಣಾಮ ಆಗುವುದಿಲ್ಲ: ವಿಜಯೇಂದ್ರಬಿಜೆಪಿ ಕಾರ್ಯಕರ್ತರು, ಮುಖಂಡರ ಗುರಿ ಸ್ಪಷ್ಟವಾಗಿದ್ದು, ಮತದಾರರನ್ನು ಪರಿಣಾಮಕಾರಿಯಾಗಿ ತಲುಪುತ್ತಿದ್ದಾರೆ. ಪ್ರಬುದ್ಧ ಮತದಾರರು ಬಿಜೆಪಿ ಮೇಲೆ, ಮೈತ್ರಿ ಅಭ್ಯರ್ಥಿಗಳ ಮೇಲೆ ವಿಶ್ವಾಸ ಇಟ್ಟುಕೊಂಡಿದ್ದಾರೆ. ಪರಿಷತ್ ಚುನಾವಣೆಯಲ್ಲಿ ಗೆಲುವಿನ ಅಂತರ ಜಾಸ್ತಿ ಆಗಲಿದೆಯೇ ಹೊರತು ಕಮ್ಮಿ ಆಗಲ್ಲ ಎಂದು ಬಿಜೆಪಿ ರಾಜ್ಯಾಧ್ಯಕ್ಷ ಬಿ.ವೈ.ವಿಜಯೇಂದ್ರ ಅಭಿಪ್ರಾಯಪಟ್ಟಿದ್ದಾರೆ.