ಪತ್ರಕರ್ತರ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರಿಕೆ ಬಿಡುಗಡೆಬೆಳ್ತಂಗಡಿ ಕೊಲ್ಲಮೊಗ್ರ ಬಂಗ್ಲೆಗುಡ್ಡೆ ಸರ್ಕಾರಿ ಶಾಲಾ ವಠಾರದಲ್ಲಿ ಫೆ.10ರಂದು ನಡೆಯಲಿರುವ ಪತ್ರಕರ್ತರ 5ನೇ ಗ್ರಾಮ ವಾಸ್ತವ್ಯದ ಆಮಂತ್ರಣ ಪತ್ರವನ್ನು ಅರಣ್ಯ ಹಾಗೂ ಪರಿಸರ ಸಚಿವ ಈಶ್ವರ ಖಂಡ್ರೆ ಹಾಗೂ ರಾಜ್ಯ ಸಭಾ ಸದಸ್ಯ, ಶ್ರೀ ಧರ್ಮಸ್ಥಳ ಕ್ಷೇತ್ರ ಧರ್ಮಾಧಿಕಾರಿ ಡಾ. ವೀರೇಂದ್ರ ಹೆಗ್ಗಡೆ ಧರ್ಮಸ್ಥಳದಲ್ಲಿ ಸೋಮವಾರ ನಡೆದ ಏಕಬಳಕೆ ಪ್ಲಾಸ್ಟಿಕ್ ನಿಷೇಧ ಘೋಷಣೆ ಕಾರ್ಯಕ್ರಮದಲ್ಲಿ ಬಿಡುಗಡೆ ಮಾಡಿದರು. ದ.ಕ.ಜಿಲ್ಲಾ ಕಾರ್ಯನಿರತ ಪತ್ರಕರ್ತರ ಸಂಘ, ಸುಳ್ಯ ತಾಲೂಕು ಕಾರ್ಯನಿರತ ಪತ್ರಕರ್ತರ ಸಂಘ, ಸುಬ್ರಹ್ಮಣ್ಯ ಪ್ರೆಸ್ ಕ್ಲಬ್ ಹಾಗೂ ದಕ್ಷಿಣ ಕನ್ನಡ ಜಿಲ್ಲಾಡಳಿತ ಸಹಿತ ಸಂಘಟನೆಗಳು ಸಹಯೋಗ ನೀಡಿದವು.