ಬಡವರು, ರೈತರು ದಲಿತ ವಿರೋಧಿ ಕೈ ಸರ್ಕಾರ: ವಿಜಯೇಂದ್ರಬಿಜೆಪಿ ಸರ್ಕಾರದ ಮೇಲೆ 40 ಪರ್ಸೆಂಟ್ ಭ್ರಷ್ಟಾಚಾರ ಆರೋಪ ಮಾಡಿದರು. ಆದರೆ ಈಗ ಬೆಂಗಳೂರು ನಗರದಲ್ಲಿ ಮನೆ ಕಟ್ಟಲು, ಸ್ಯಾಂಕ್ಷನ್ ತೆಗೆದುಕೊಳ್ಳಬೇಕು ಎಂದರೆ ಸ್ಕ್ವಾರ್ ಫೀಟ್ಗೆ 100 ರು.ನಂತೆ ಲಂಚ ಕೊಡಬೇಕು. ಮುಂದಿನ ಲೋಕಸಭೆ ಚುನಾವಣೆ ಬಳಿಕ ಸಚಿವ ಸಂಪುಟ ವಿಸ್ತರಣೆ ಮಾಡುವ ವೇಳೆ ಸ್ಕ್ವಾರ್ ಫೀಟ್ ಮಂತ್ರಿ ಅಂತ ಹೊಸ ಖಾತೆ ಮಾಡಿದರೂ ಆಶ್ಚರ್ಯ ಇಲ್ಲ ಎಂದು ವಿಜಯೇಂದ್ರ ಲೇವಡಿ ಮಾಡಿದರು.