ವೇಣೂರು ಸ್ಫೋಟ ಪ್ರಕರಣ: ಮಾಹಿತಿ ಸಂಗ್ರಹ, ತನಿಖೆ ಕಾರ್ಯ ಚುರುಕುರಾಜ್ಯವನ್ನೇ ಬೆಚ್ಚಿ ಬೀಳಿಸಿದ್ದ ಈ ಪ್ರಕರಣದ ತನಿಖೆಗೆ ಆಂತರಿಕ ಭದ್ರತಾ ವಿಭಾಗದ ಡಿಐಜಿ ರವಿ ಚೆನ್ನಣ್ಣನವರ್, ಜಿಲ್ಲಾ ಪೊಲೀಸ್ ಅಧೀಕ್ಷಕ ರಿಷ್ಯಂತ್ ಸೇರಿದಂತೆ ರಾಜ್ಯ ಅಗ್ನಿಶಾಮಕ ದಳ ಮತ್ತು ತುರ್ತು ಸೇವೆಗಳ ಉಪನಿರ್ದೇಶಕ (ಆಡಳಿತ) ತಿಪ್ಪೇಸ್ವಾಮಿ ಮುಖ್ಯ ಅಗ್ನಿಶಾಮಕ ಅಧಿಕಾರಿ ತಿರುಮಲೇಶ್, ಪ್ರಾದೇಶಿಕ ಅಗ್ನಿಶಾಮಕ ಅಧಿಕಾರಿ ರಂಗನಾಥ್, ಜಿಲ್ಲಾ ಅಗ್ನಿಶಾಮಕ ಅಧಿಕಾರಿ ಭರತ್ ಸೇರಿದಂತೆ ಹಲವು ಇಲಾಖೆಗಳ ಅಧಿಕಾರಿ ವರ್ಗ ಆಗಮಿಸಿತ್ತು.