ಸುಡುಮದ್ದು ತಯಾರಿಕಾ ಘಟಕದಲ್ಲಿ ಸ್ಫೋಟ: ಮೂವರು ಸಾವುಮೃತಪಟ್ಟ ಮೂವರು, ತಯಾರಿಕಾ ಘಟಕದಲ್ಲಿ ಸ್ಫೋಟಕ ತಯಾರಿಸುತ್ತಿದ್ದರು. ಇಬ್ಬರ ದೇಹ ಸ್ಫೋಟದ ಸುತ್ತ ನೂರು ಮೀಟರ್ ವ್ಯಾಪ್ತಿಯಲ್ಲಿ ಛಿದ್ರವಾಗಿ ಬಿದ್ದಿದೆ. ಮೃತದೇಹ ಪತ್ತೆಹಚ್ಚಲು ಪರದಾಡುವಂತಾಯಿತು. ಸ್ಥಳಕ್ಕೆ ಬೆಳ್ತಂಗಡಿ ಅಗ್ನಿಶಾಮಕ ಸಿಬ್ಬಂದಿ ತಕ್ಷಣ ಬೆಂಕಿನಂದಿಸಿ ಅರೆ ಜೀವಾವಸ್ಥೆಯಲ್ಲಿದ್ದ ಒಬ್ಬರನ್ನು ಆಸ್ಪತ್ರೆಗೆ ಸಾಗಿಸಿದರೂ ಆಸ್ಪತ್ರೆಯಲ್ಲಿ ಮೃತಪಟ್ಟಿದ್ದಾರೆ.