ಅಂಬೇಡ್ಕರ್ ಆಶಯ ಪ್ರಕಾರ ಸಂವಿಧಾನ ರಕ್ಷಣೆ ಅಗತ್ಯ: ಸಚಿವ ಮಹಾದೇವಪ್ಪಭಾನುವಾರ ಸಂಜೆ ಬಂಟ್ವಾಳ ತಾಲೂಕು ಆಡಳಿತ, ತಾಲೂಕು ಪಂಚಾಯಿತಿ, ಪುರಸಭೆ ಹಾಗೂ ಸಮಾಜ ಕಲ್ಯಾಣ ಇಲಾಖೆ ಬಂಟ್ವಾಳ ತಾಲೂಕು ಆಶ್ರಯದಲ್ಲಿ ತಾಲೂಕು ಮಟ್ಟದ ಡಾ. ಬಿ.ಆರ್.ಅಂಬೇಡ್ಕರ್ ಭವನವನ್ನು ಸಮಾಜ ಕಲ್ಯಾಣ ಸಚಿವ ಡಾ.ಎಚ್.ಸಿ.ಮಹಾದೇವಪ್ಪ ಉದ್ಘಾಟಿಸಿದರು.ಡಾ. ಬಿ.ಆರ್.ಅಂಬೇಡ್ಕರ್ ಅವರ ವಿಚಾರಧಾರೆಗಳಿಗೆ ಪೂರಕವಾಗಿ ಸಂವಿಧಾನವನ್ನು ರಕ್ಷಣೆ ಮಾಡುವ ಕಾರ್ಯ ಇಂದು ನಡೆಯಬೇಕಾಗಿದ್ದು, ಪ್ರಜಾಪ್ರಭುತ್ವವೇ ಅಪಾಯದಲ್ಲಿರುವ ಈ ಹೊತ್ತಿನಲ್ಲಿ ಅಂಬೇಡ್ಕರ್ ಆಶಯದ ಪ್ರಕಾರ ನಡೆದುಕೊಳ್ಳುವ ಕೆಲಸವಾಗಬೇಕು ಎಂದು ಆಶಿಸಿದರು.