ರಾಮ ಮಂದಿರ ಉಳಿವಿಗೆ ಹಿಂದುಗಳು ಬಹುಸಂಖ್ಯಾತರಾಗಿಯೇ ಇರಬೇಕು: ಪೇಜಾವರ ಶ್ರೀವಿಶ್ವ ಹಿಂದು ಪರಿಷತ್ ಮಂಗಳೂರು ವತಿಯಿಂದ ಶ್ರೀ ಕ್ಷೇತ್ರ ಕದ್ರಿಯ ರಾಜಾಂಗಣದಲ್ಲಿ ಪೇಜಾವರಶ್ರೀಗಳ ಗುರುವಂದನೆ ಕಾರ್ಯಕ್ರಮ ನಡೆಯಿತು. ಈ ವೇಳೆ ರಾಮ ಮಂದಿರವನ್ನು ಮುಂದಿನ ದಿನಗಳಲ್ಲಿ ಉಳಿಸಿಕೊಳ್ಳುವ ಹೊಣೆಗಾರಿಕೆ ನಮ್ಮೆಲ್ಲರಿಗೂ ಇದೆ. ಮಂದಿರ ಮತ್ತೊಮ್ಮೆ ವಿದೇಶಿಯರ, ವಿಧ್ವಂಸಕರ ಕೈಗೆ ಸಿಲುಕದಂತೆ ನೋಡಿಕೊಳ್ಳಬೇಕಿದೆ ಎಂದು ಶ್ರೀಗಳು ಹೇಳಿದರು.