ಪಶ್ಚಿಮ ವಲಯ ನೂತನ ಡಿಐಜಿ ಆಗಿ ಅಮಿತ್ ಸಿಂಗ್ ಅಧಿಕಾರ ಸ್ವೀಕಾರ2007ರ ಬ್ಯಾಚ್ನ ಐಪಿಎಸ್ ಅಧಿಕಾರಿಯಾಗಿರುವ ಅಮಿತ್ ಸಿಂಗ್, 2009ರಿಂದ 2011ರಲ್ಲಿ ಎಎಸ್ಪಿಯಾಗಿ ಮಂಗಳೂರು, ಪುತ್ತೂರಿನಲ್ಲಿ ಕರ್ತವ್ಯ ನಿರ್ವಹಿಸಿದ್ದರು. 2011ರಿಂದ ಹಾಸನ ಎಸ್ಪಿಯಾಗಿ, ಬಳಿಕ ಗುಲ್ಬರ್ಗ, ಬೆಂಗಳೂರು ಗ್ರಾಮಾಂತರದಲ್ಲಿ ಎಸ್ಪಿಯಾಗಿ ಕಾರ್ಯ ನಿರ್ವಹಿಸಿದ್ದಾರೆ. ಮಾತ್ರವಲ್ಲದೆ, ನಾಲ್ಕು ವರ್ಷಗಳ ಕಾಲ ರಾಷ್ಟ್ರೀಯ ತನಿಖಾ ದಳ (ಎನ್ಐಎ)ಯಲ್ಲಿ ಕೆಲಸ ನಿರ್ವಹಿಸಿದ್ದಾರೆ.