ಎಂಡೋಸಲ್ಫಾನ್ ಹೂತಿರುವ ವಿಚಾರ: ಪರಿಸರ ಮಾಲಿನ್ಯ ನಿಯಂತ್ರಣ ಮಂಡಳಿ ಅಧಿಕಾರಿಗಳ ಭೇಟಿ, ಪರಿಶೀಲನೆಕೇರಳ- ಕರ್ನಾಟಕ ಗಡಿ ಪ್ರದೇಶವಾದ ಮಿಂಚಿಪದವು ಎಂಬಲ್ಲಿನ ಪಾಳು ಬಾವಿಯಲ್ಲಿ ಕೇರಳ ಪ್ಲಾಂಟೇಶನ್ ಕಾರ್ಪೊರೇಶನ್ ಗೋದಾಮಿನಲ್ಲಿ ಇರಿಸಲಾಗಿದ್ದ ಎಂಡೋಸಲ್ಫಾನ್ನ್ನು ಮಣ್ಣಿನಡಿ ಹೂತು ಹಾಕಿರುವ ವಿಚಾರದಲ್ಲಿ ರಾಷ್ಟ್ರೀಯ ಹಸಿರು ನ್ಯಾಯಮಂಡಳಿಯ ದಕ್ಷಿಣ ಪೀಠ ಪರಿಶೀಲನೆ ನಡೆಸಲು ನೋಟಿಸ್ ಜಾರಿಗೊಳಿಸಿದೆ.