ರಾಜ್ಯ ಆರೋಗ್ಯ ಸಚಿವರಿಂದ ಮೂಲ್ಕಿ ಸರ್ಕಾರಿ ಆಸ್ಪತ್ರೆ ಭೇಟಿರಾಜ್ಯ ಆರೋಗ್ಯ ಸಚಿವ ಹಾಗೂ ದ.ಕ. ಜಿಲ್ಲಾ ಉಸ್ತುವಾರಿ ಸಚಿವ ದಿನೇಶ್ ಗುಂಡೂರಾವ್, ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರಕ್ಕೆ ಭೇಟಿ ನೀಡಿ ಆಸ್ಪತ್ರೆಯ ಕಾರ್ಯವೈಖರಿ ಪರಿಶೀಲಿಸಿದರು. ಮೂಲ್ಕಿ ಸಮುದಾಯ ಆರೋಗ್ಯ ಕೇಂದ್ರದಲ್ಲಿ ಡಯಾಲಿಸಿಸ್ ಕೇಂದ್ರವನ್ನು ಜನವರಿಯಲ್ಲಿ ಆರಂಭಿಸಲಾಗವುದು. ಆಸ್ಪತ್ರೆಗೆ ಹೆರಿಗೆ ತಜ್ಞರ ನೇಮಕ ಮಾಡಲಾಗುವುದು. ಆಸ್ಪತ್ರೆಗೆ 2 ಡಯಾಲಿಸಿಸ್ ಯಂತ್ರಗಳನ್ನು ಕೂಡಲೇ ಮಂಜೂರು ಮಾಡಲಾಗುವುದು ಎಂದು ತಿಳಿಸಿದರು.