ದಕ್ಷಿಣ ಕನ್ನಡದಲ್ಲಿ ಇಬ್ಬರಲ್ಲಿ ಕೊರೋನಾ ಸೋಂಕು: ಕೇರಳ ಗಡಿ ತಲಪಾಡಿಯಲ್ಲಿ ಜಾಗೃತಿತಲಪಾಡಿ ಗ್ರಾಮ ಪಂಚಾಯಿತಿ ಸಿಬ್ಬಂದಿ ಕೊರೊನಾ ಮಹಾಮಾರಿಯಿಂದ ರಕ್ಷಣೆಗೆ ಹಿರಿಯರು, ಗರ್ಭಿಣಿಯರು, ಆರೋಗ್ಯ ಸಮಸ್ಯೆ ಇರುವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು,ಶೀತ ಕಫ ಸೇರಿದಂತೆ ಆರೋಗ್ಯ ಸಮಸ್ಯೆಯಿರುವವರು ಸ್ಥಳೀಯರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯಬೇಕು, ಗಡಿ ಪ್ರದೇಶದಲ್ಲಿ ಕೇರಳದಿಂದ ಬಂದಿರುವ ಪ್ರಯಾಣಿಕರು ಗುಂಪು ಸೇರದೆ ಅಂತರ ಕಾಯ್ದುಕೊಳ್ಳಬೇಕು ಎಂದು ಧ್ವನಿವರ್ಧಕದ ಮೂಲಕ ಜಾಗೃತಿ ಮೂಡಿಸುತ್ತಿದ್ದಾರೆ.