ತೆಂಗಿನ ಮೌಲ್ಯವರ್ಧಿತ ಉತ್ಪನ್ನಗಳಿಗೆ ಆದ್ಯತೆ ನೀಡಿ: ಡಾ.ಧರ್ಮಪಾಲನಾಥ ಸ್ವಾಮೀಜಿಕಲ್ಪವೃಕ್ಷ ಎನಿಸಿಕೊಂಡಿರುವ ತೆಂಗಿನ ಮರಗಳ ಮೌಲ್ಯಗಳ ಬಗ್ಗೆ ನಾವು ಚೆನ್ನಾಗಿ ತಿಳಿದುಕೊಂಡಿಲ್ಲ. ತೆಂಗಿನ ಕಾಯಿಯಿಂದ ಹಲವು ಉಪ ಉತ್ಪನ್ನಗಳು ದೊರೆಯುತ್ತಿದೆ. ನಾವು ತೆಂಗಿನ ಮರಗಳನ್ನು ಐದು ವರ್ಷಗಳ ಕಾಲ ಪೋಷಿಸಿದರೆ ಅದರ ಫಲ ನಮಗೆ ದೊರೆಯುವುದು ಮಾತ್ರವಲ್ಲ, ಭವಿಷ್ಯದ ಪೀಳಿಗೆಗೂ ಮುಂದುವರಿಯುತ್ತದೆ ಎಂದು ಶ್ರೀ ಆದಿಚುಂಚನಗಿರಿ ಮಹಾಸಂಸ್ಥಾನದ ಕಾವೂರು ಶಾಖಾ ಮಠದ ಡಾ.ಧರ್ಮಪಾಲನಾಥ ಸ್ವಾಮೀಜಿ ತಿಳಿಸಿದ್ದಾರೆ.