ಪುತ್ತೂರು ನಂದಿ ರಥಯಾತ್ರೆ: ಪುತ್ತೂರು ಮುಖ್ಯರಸ್ತೆಯಲ್ಲಿ ವೈಭವದ ಮೆರವಣಿಗೆಗೋ ಸೇವಾ ಗತಿವಿಧಿ ಕರ್ನಾಟಕ, ರಾಧಾ ಸುರಭಿ ಗೋ ಮಂದಿರ, ರಾಷ್ಟ್ರೀಯ ಗೋ ಸೇವಾ ಸಂಸ್ಥಾನ ಟ್ರಸ್ಟ್ ಸಹಯೋಗದಲ್ಲಿ ಕರ್ನಾಟಕ ರಾಜ್ಯಾದ್ಯಂತ ಸಂಚರಿಸಿದ ನಂದಿ ರಥಯಾತ್ರೆ ಭಾನುವಾರ ಸಂಜೆ ಪುತ್ತೂರಿಗೆ ಆಗಮಿಸಿದ್ದು, ನಗರದ ದರ್ಬೆ ವೃತ್ತದ ಬಳಿ ರಥಯಾತ್ರೆಯನ್ನು ಸ್ವಾಗತಿಸಲಾಯಿತು. ಬಳಿಕ ಮೆರವಣಿಗೆ ಮೂಲಕ ಪುತ್ತೂರು ಮಹತೋಭಾರ ಶ್ರೀ ಮಹಾಲಿಂಗೇಶ್ವರ ದೇವಾಲಯದ ಬಳಿಗೆ ತರಲಾಯಿತು.