ಕನ್ನಡ ಮಾಧ್ಯಮ ಶಾಲೆಗಳನ್ನು ಕೇಳುವವರಿಲ್ಲ. ಅದಕ್ಕೆಂದೂ ಭವಿಷ್ಯವೇ ಇಲ್ಲ ಎನ್ನುವ ವಾತಾವರಣದ ನಡುವೆ ನಾಡಿನ ಮೂಲೆ ಮೂಲೆಯಿಂದ ಮೂಡುಬಿದಿರೆಯ ವಿದ್ಯಾಗಿರಿಗೆ 15986ಕ್ಕೂ ಹೆಚ್ಚು ವಿದ್ಯಾರ್ಥಿಗಳು, ಅವರ ಪೋಷಕರು ಕನ್ನಡ ಮಾಧ್ಯಮ ಶಾಲೆಯಲ್ಲಿ ದಾಖಲಾತಿಗಾಗಿ ಪ್ರವೇಶ ಪರೀಕ್ಷೆ ಬರೆಯಲು ಬಂದಿದ್ದರು.
ಮಂಗಳೂರು ಹೊರವಲಯದ ಉಳ್ಳಾಲ ಕೋಟೆಕಾರಿನಲ್ಲಿ ರಾಜ್ಯ ಧಾರ್ಮಿಕ ದತ್ತಿ ಇಲಾಖೆಗೆ ಸೇರಿದ ಕೊಂಡಾಣ ದೈವಸ್ಥಾನದಲ್ಲಿ ಆಡಳಿತ ಮಂಡಳಿ ವಿಚಾರದಲ್ಲಿ ಎರಡು ಬಣಗಳ ಮಧ್ಯೆ ವಿವಾದ ಉಂಟಾಗಿ ಭಂಡಾರದ ಮನೆ ಧ್ವಂಸ ಮಾಡಿದ ಘಟನೆ ಸಂಭವಿಸಿದೆ. ಈ ಘಟನೆಗೆ ಸಂಬಂಧಿಸಿ ಮೂರು ಮಂದಿ ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ.
ಮಂಗಳೂರು ವಿಶ್ವವಿದ್ಯಾಲಯ ವ್ಯಾಪ್ತಿಯ ಅತಿಥಿ ಉಪನ್ಯಾಸಕರು ಕೊಡಗಿನ ಫೀಲ್ಡ್ ಮಾರ್ಷಲ್ ಕೆ.ಎಂ.ಕಾರ್ಯಪ್ಪ ಕಾಲೇಜಿನಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದು, ಕಳೆದ ಆರೇಳು ತಿಂಗಳಿಂದ ವೇತನ ಪಾವತಿಯಾಗದ ಹಿನ್ನೆಲೆಯಲ್ಲಿ ತರಗತಿ ಬಹಿಷ್ಕರಿಸಿ ನಡೆಸುತ್ತಿರುವ ಪ್ರತಿಭಟನೆ ಶನಿವಾರ ಐದನೇ ದಿನಕ್ಕೆ ತಲುಪಿದೆ.
ಲೋಕಸಭಾ ಚುನಾವಣೆಗೆ ಬಿಜೆಪಿಯ ಪ್ರಥಮ 195 ಅಭ್ಯರ್ಥಿಗಳ ಪಟ್ಟಿಯಲ್ಲಿ ಹಿಂದುಳಿದ ವರ್ಗಗಳ 57 ಅಭ್ಯರ್ಥಿಗಳಿಗೆ ಟಿಕೆಟ್ ನೀಡುವ ಮೂಲಕ ನರೇಂದ್ರ ಮೋದಿ ಮತ್ತು ಅಮಿತ್ ಶಾ ಅವರು ಹಿಂದುಳಿದ ಸಮುದಾಯಗಳಿಗೆ ಹೆಚ್ಚು ಪ್ರಾತಿನಿಧ್ಯ ನೀಡಿದ್ದಾರೆ