ಫಲಾನುಭವಿಗಳ ಆಯ್ಕೆ ತ್ವರಿತವಾಗಿ ನಡೆಸಲು ಜಿಲ್ಲಾಧಿಕಾರಿ ಸೂಚನೆಫಲಾನುಭವಿಗಳ ದಾಖಲೆ ಪರಿಶೀಲನೆ, ಸ್ಥಳ ಪರಿಶೀಲನೆ, ಮತ್ತಿತರ ಪ್ರಕ್ರಿಯೆಗಳನ್ನು ವಿಳಂಬವಾಗಿ ನಡೆಸುವುದು ಸರಿಯಲ್ಲ. ಇದರಿಂದ ಅರ್ಹ ಫಲಾನುಭವಿಗಳಿಗೆ ಸಕಾಲದಲ್ಲಿ ಸೌಲಭ್ಯಗಳು ಸಿಗುವುದಿಲ್ಲ. ಈ ನಿಟ್ಟಿನಲ್ಲಿ ಅಗತ್ಯವಿದ್ದರೆ ಮಾತ್ರ ಫಲಾನುಭವಿಗಳ ವಾಸಸ್ಥಳ ಪರಿಶೀಲನೆ ನಡೆಸಿ ತ್ವರಿತಗತಿಯಲ್ಲಿ ಸೌಲಭ್ಯಗಳನ್ನು ಮಂಜೂರು ಮಾಡಬೇಕು ಎಂದು ಜಿಲ್ಲಾಧಿಕಾರಿ ದರ್ಶನ್ ಎಚ್.ವಿ. ಸೂಚಿಸಿದ್ದಾರೆ.