• ಭಾರತ
  • ಪ್ರಪಂಚ
  • ವಿಶೇಷ
  • ರಾಜಕೀಯ
  • ಮನರಂಜನೆ
  • ಅಪರಾಧ
  • ಕ್ರೀಡೆ
  • ಕರ್ನಾಟಕ
  • ಇ- ಪೇಪರ್
  • Home
  • karnataka-news
  • dakshina-kannada

dakshina-kannada

ಫೀಚರ್ಡ್‌ವಿಜಯನಗರಚಿಕ್ಕಬಳ್ಳಾಪುರಚಿತ್ರದುರ್ಗಮೈಸೂರು
ತುಮಕೂರುವಿಜಯಪುರಗದಗ ದಾವಣಗೆರೆಉತ್ತರ-ಕನ್ನಡಬಾಗಲಕೋಟೆಶಿವಮೊಗ್ಗಚಾಮರಾಜನಗರದಕ್ಷಿಣ ಕನ್ನಡಮಂಡ್ಯಕೊಪ್ಪಳಹಾವೇರಿಯಾದಗಿರಿಬೆಂಗಳೂರುಬೆಳಗಾವಿಚಿಕ್ಕಮಗಳೂರುಬೀದರ್ಉಡುಪಿರಾಯಚೂರುರಾಮನಗರಕೊಡಗುಧಾರವಾಡಕಲಬುರಗಿಕೋಲಾರಬಳ್ಳಾರಿಹಾಸನ
ಮೂಲ್ಕಿಯ ನಾರಾಯಣ ಗುರು ಕಾಲೇಜಿಗೆ ಶೇ. ೧೦೦ ಫಲಿತಾಂಶ
ಬುಧವಾರ ಪ್ರಕಟವಾದ ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ಮೂಲ್ಕಿ ಶ್ರೀ ನಾರಾಯಣ ಗುರು ಸಂಯುಕ್ತ ಪದವಿ ಪೂರ್ವ ಕಾಲೇಜು ಶೇಕಡಾ 100 ಫಲಿತಾಂಶ ಗಳಿಸಿದೆ. ವಿಜ್ಞಾನ ವಿಭಾಗದಲ್ಲಿ 43ಮಂದಿ ಪರೀಕ್ಷೆಗೆ ಹಾಜರಾಗಿದ್ದು ವಿಶಿಷ್ಟ ಶ್ರೇಣಿ 13 , ಪ್ರಥಮ ದರ್ಜೆ 29, ದ್ವಿತೀಯ ದರ್ಜೆ 1 ಫಲಿತಾಂಶ ಬಂದಿದೆ.
ದಕ್ಷಿಣ ಕನ್ನಡದಲ್ಲಿ ಸಾಮರಸ್ಯ ಪುನರ್‌ ಸ್ಥಾಪಿಸಬೇಕಿದೆ: ಪದ್ಮರಾಜ್‌
ಮಂಗಳೂರಿನ ಬಿಜೈ ವಾರ್ಡ್‌ ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದ ದ.ಕ. ಕಾಂಗ್ರೆಸ್ ಅಭ್ಯರ್ಥಿ ಪದ್ಮರಾಜ್, ಸಾಮರಸ್ಯ ಮರುಸ್ಥಾಪನೆಯ ಜತೆ ಜತೆಗೆ ಜಿಲ್ಲೆಯ ಸರ್ವತೋಮುಖ ಬೆಳವಣಿಗೆ ಆಗಬೇಕಿದೆ. ಪ್ರವಾಸೋದ್ಯಮ ಅಭಿವೃದ್ಧಿ, ಹೂಡಿಕೆಯಿಂದ ಉದ್ದಿಮೆಗಳ ಸ್ಥಾಪನೆ, ಈ ಮೂಲಕ ವಿದ್ಯಾವಂತರಿಗೆ ಜಿಲ್ಲೆಯೊಳಗೆ ಉದ್ಯೋಗ ಸೃಷ್ಟಿ ಮಾಡಬೇಕಿದೆ ಎಂದರು.
ಪುತ್ತೂರು ಶ್ರೀ ಮಹಾಲೀಗೇಶ್ವರ ದೇವರ ವಾರ್ಷಿಕ ಜಾತ್ರೆ ಧ್ವಜಾರೋಹಣ
ಪುತ್ತೂರು ಶ್ರೀ ಮಹಾಲಿಂಗೇಶ್ವರ ದೇವಸ್ಥಾನದಲ್ಲಿವಾರ್ಷಿಕ ಜಾತ್ರೋತ್ಸವ ಪ್ರಯಕ್ತ ಬುಧವಾರ ಕುಂಟಾರು ರವೀಶ ತಂತ್ರಿ ನೇತೃತ್ವದಲ್ಲಿ ಧಾರ್ಮಿಕ ವಿಧಿ ವಿಧಾನಗಳನ್ನು ನೆರವೇರಿಸಲಾಯಿತು. ಬೆಳಗ್ಗೆ ಶ್ರೀ ದೇವಾಲಯದಲ್ಲಿ ಪ್ರಾರ್ಥನೆ ನಡೆದು ಅನಂತರ ದೇವರ ಬಲಿ ಉತ್ಸವದ ಬಳಿಕ ಧ್ವಜಸ್ತಂಭ ಪೂಜೆ ನಡೆದು ಧ್ವಜಾರೋಹಣ ನೆರವೇರಿಸಲಾಯಿತು.
14ರಂದು ಮಂಗ್ಳೂರಲ್ಲಿ ಪ್ರಧಾನಿ ನರೇಂದ್ರ ಮೋದಿ ಸಮಾವೇಶ ಬದಲು ರೋಡ್‌ಶೋ
ಲೋಕಸಭೆ ಚುನಾವಣೆ ಹಿನ್ನೆಲೆಯಲ್ಲಿ ಪ್ರಧಾನಿ ನರೇಂದ್ರ ಮೋದಿ ಏ.14ರಂದು ಮಂಗಳೂರಿನಲ್ಲಿ ಸಾರ್ವಜನಿಕ ಸಮಾವೇಶ ಬದಲು ರೋಡ್‌ಶೋ ನಡೆಸಲಿದ್ದಾರೆ. ರೋಡ್‌ಶೋ ಯಶಸ್ಸಿಗೆ ಬಿಜೆಪಿ ಪೂರ್ವ ಸಿದ್ಧತೆ ಆರಂಭಿಸಿದೆ. ಬುಧವಾರ ಜಿಲ್ಲಾ ಬಿಜೆಪಿ ಕಚೇರಿಯಲ್ಲಿ ದ.ಕ.ಬಿಜೆಪಿ ಅಧ್ಯಕ್ಷ ಸತೀಶ್‌ ಕುಂಪಲ ಸುದ್ದಿಗೋಷ್ಠಿಯಲ್ಲಿ ಮಾಹಿತಿ ನೀಡಿದರು.
ಆಳ್ವಾಸ್ ನ 45 ವಿದ್ಯಾರ್ಥಿಗಳು ಟಾಪರ್ಸ್
ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಮೂಡುಬಿದಿರೆ ಆಳ್ವಾಸ್‌ ಕಾಲೇಜಿನಲ್ಲಿ ವಿಜ್ಞಾನ ವಿಭಾಗದಲ್ಲಿ 26, ವಾಣಿಜ್ಯ 18, ಕಲಾ ವಿಭಾಗ 1 ಒಟ್ಟು 45 ವಿದ್ಯಾರ್ಥಿಗಳು ಟಾಪ್ ಟೆನ್ ರ‍್ಯಾಂಕ್‌ ಸಾಧನೆ ಮೆರೆದಿದ್ದಾರೆ. 2882 ವಿದ್ಯಾರ್ಥಿಗಳು ಡಿಸ್ಟಿಂಕ್ಷನ್ ಸಾಧನೆ ಮಾಡಿದ್ದು 682 ವಿದ್ಯಾರ್ಥಿಗಳು ಶೇ 95ಕ್ಕೂ ಅಧಿಕ ಅಂಕ ಗಳಿಕೆಯ ಸಾಧನೆ ಮಾಡಿದ್ದಾರೆ.
ದಕ್ಷಿಣ ಕನ್ನಡದಲ್ಲಿ ಸಂಭ್ರಮದ ಈದುಲ್ ಫಿತ್ರ್‌ ಆಚರಣೆ
ದಕ್ಷಿಣ ಕನ್ನಡ ಜಿಲ್ಲೆಯ ಮುಸ್ಲಿಮ್‌ ಬಾಂಧವರು ಬುಧವಾರ ಅತ್ಯಂತ ಸಡಗರ, ಸಂಭ್ರಮದಿಂದ ‘ಈದುಲ್ ಫಿತ್ರ್’ ಆಚರಿಸಿದರು. ಜಿಲ್ಲೆಯ ಎಲ್ಲ ಜುಮಾ ಮಸೀದಿ, ಈದ್ಗಾಗಳಲ್ಲಿ ಸಾಮೂಹಿಕ ನಮಾಝ್, ಈದ್ ಖುತ್ಬಾ, ಈದ್ ಸಂದೇಶ, ಪ್ರವಚನ, ಈದ್ ಶುಭಾಶಯ, ಸಂಬಂಧಿಕರ ಮನೆಗೆ ಸೌಹಾರ್ದ ಭೇಟಿಯ ಮೂಲಕ ಹಬ್ಬ ಕಳೆಗಟ್ಟಿತು.
ಬೆಳ್ತಂಗಡಿ: ಫ್ಲೈಯಿಂಗ್ ಸ್ಕ್ವಾಡ್ ವಾಹನ ತಪಾಸಣೆ ಚುರುಕು
ಚುನಾವಣಾ ನೀತಿ ಸಂಹಿತೆ ಪಾಲಿಸುವ ಸಲುವಾಗಿ ಬೆಳ್ತಂಗಡಿ ತಾಲೂಕಿನ ಚಾರ್ಮಾಡಿ ಹಾಗೂ ನಾರಾವಿಯಲ್ಲಿ ಚೆಕ್ ಪೋಸ್ಟ್ ತೆರೆಯಲಾಗಿದ್ದು ನಿರಂತರ ವಾಹನ ತಪಾಸಣೆ ನಡೆಯುತ್ತಿವೆ. ತಾಲೂಕಿನ ಅಲ್ಲಲ್ಲಿ ವಿಶೇಷ ಫ್ಲೈಯಿಂಗ್ ಸ್ಕ್ವಾಡ್ ಗಳು ಕಾರ್ಯನಿರ್ವಹಿಸುತ್ತಿದ್ದು ತಾಲೂಕಿನ ಬೆಳ್ತಂಗಡಿ, ಕೊಕ್ಕಡ ಹಾಗೂ ವೇಣೂರು ಹೋಬಳಿಗಳ ವ್ಯಾಪ್ತಿಯ ಹೆದ್ದಾರಿ ಹಾಗೂ ಇತರ ರಸ್ತೆಯಲ್ಲಿ ವಾಹನ ತಪಾಸಣೆ ನಡೆಸುತ್ತಿವೆ.
ದ್ವಿತೀಯ ಪಿಯು ಫಲಿತಾಂಶ: ದಕ್ಷಿಣ ಕನ್ನಡ ರಾಜ್ಯಕ್ಕೆ ಪ್ರಥಮ
ದ್ವಿತೀಯ ಪಿಯು ಫಲಿತಾಂಶದಲ್ಲಿ ದ.ಕ.ಜಿಲ್ಲೆ ಈ ಬಾರಿ ಶೇ.97.37 ಫಲಿತಾಂಶ ದಾಖಲಿಸುವುದರೊಂದಿಗೆ ನಿರಂತರ ಅಗ್ರ ಸ್ಥಾನ ಕಾಯ್ದುಕೊಂಡಿದೆ. ಉಡುಪಿ ಶೇ.96.80 ಫಲಿತಾಂಶದೊಂದಿಗೆ ದ್ವಿತೀಯ ಸ್ಥಾನ ಪಡೆದಿದೆ. ದ.ಕ.ಜಿಲ್ಲೆಗೆ ಈ ಬಾರಿ ಪಿಯುಸಿ ಫಲಿತಾಂಶದಲ್ಲಿ ಒಟ್ಟು 11 ಆಗ್ರ ಸ್ಥಾನ ಲಭಿಸಿದೆ. ವಾಣಿಜ್ಯ ವಿಭಾಗದಲ್ಲಿ ಮಂಗಳೂರಿನ ಕೆನರಾ ಪಿಯು ಕಾಲೇಜಿನ ತುಳಸಿ ಪೈ 596 ಅಂಕಗಳೊಂದಿಗೆ ಟಾಪರ್‌ನಲ್ಲಿ ರಾಜ್ಯಕ್ಕೆ ದ್ವಿತೀಯ ಸ್ಥಾನ ಪಡೆದಿದ್ದಾರೆ. ವಿಜ್ಞಾನ ವಿಭಾಗದಲ್ಲಿ ಮೂಡುಬಿದಿರೆ ಎಕ್ಸಲೆಂಟ್‌ ಪಿಯು ಕಾಲೇಜಿನ ಗುಣಸಾಗರ್‌ 597 ಅಂಕಗಳೊಂದಿಗೆ ಟಾಪರ್‌ನಲ್ಲಿ ದ್ವಿತೀಯ ಸ್ಥಾನ ಗಳಿಸಿದ್ದಾರೆ.
ಕೋವಿ ಠೇವಣಿಗೆ ರೈತರ ವಿರೋಧ: ‘ತೋಟ ರಕ್ಷಣೆಗೆ ಪೊಲೀಸ್‌ ನೇಮಿಸಿ’ ಅಭಿಯಾನ
ದ.ಕ. ಜಿಲ್ಲೆಯ ರೈತರು ತಮ್ಮ ತೋಟಗಳಿಗೆ ಮಂಗ ಹಾಗೂ ಕಾಡು ಪ್ರಾಣಿಗಳಿಂದ ತೊಂದರೆ ಯಾದರೆ ತಕ್ಷಣ ತುರ್ತುಸೇವೆ (೧೧೨) ಗೆ ಪೋನ್ ಮಾಡುವ ಅಭಿಯಾನ ನಡೆಸಲಿದ್ದಾರೆ. ಕೋವಿ ಠೇವಣಿ ಇಡುತ್ತೇವೆ. ಆದರೆ ‘ತೋಟ ರಕ್ಷಣೆಗೆ ಪೊಲೀಸರನ್ನು ನೇಮಕ ಮಾಡಿ’ ಎಂಬ ಘೋಷಣೆಯೊಂದಿಗೆ ಫೋನ್ ಅಭಿಯಾನ ನಡೆಸಲಾಗುವುದು ಎಂದು ರೈತಸಂಘ ಹಸಿರುಸೇನೆ ಜಿಲ್ಲಾಧ್ಯಕ್ಷ ಶ್ರೀಧರ ಶೆಟ್ಟಿ ಬೈಲುಗುತ್ತು ತಿಳಿಸಿದ್ದಾರೆ.
ಎಕ್ಸಲೆಂಟ್‌ ಸಂಸ್ಥೆಯ ೧೫ ವಿದ್ಯಾರ್ಥಿಗಳು ಟಾಪರ್ಸ್
ಈ ಬಾರಿ ಪಿಯುಸಿ ಪರೀಕ್ಷೆಯಲ್ಲಿ ಮೂಡುಬಿದಿರೆ ಎಕ್ಸಲೆಂಟ್ ಶಿಕ್ಷಣ ಸಂಸ್ಥೆಯ 15 ಮಂದಿ ವಿದ್ಯಾರ್ಥಿಗಳು ರಾಜ್ಯಮಟ್ಟದ ಟಾಪರ್ಸ್‌ಗಳಾಗಿದ್ದಾರೆ. ಸಂಸ್ಥೆಯ ಗುಣಸಾಗರ್ ( 597) ಸೈನ್ಸ್‌ನಲ್ಲಿ ರಾಜ್ಯಕ್ಕೆ ೨ನೇ ರ‍್ಯಾಂಕ್ ವಾಣಿಜ್ಯ ವಿಭಾಗದಲ್ಲಿ ಭಾರ್ಗವಿ (595) ರಾಜ್ಯಕ್ಕೆ ೫ನೇ ರ‍್ಯಾಂಕ್ ತನ್ನದಾಗಿಸಿಕೊಂಡಿದ್ದು ವಿಜ್ಞಾನ ವಿಭಾಗದಲ್ಲಿ 7 ಮತ್ತು ವಾಣಿಜ್ಯ ವಿಭಾಗದಲ್ಲಿ 8 ಹೀಗೆ ಸಂಸ್ಥೆಯ 15 ವಿದ್ಯಾರ್ಥಿಗಳ ರ‍್ಯಾಂಕ್ ಟಾಪರ್ಸ್ ಸಾಧನೆಯೊಂದಿಗೆ ಹೊಸ ದಾಖಲೆ ಬರೆದಿದೆ.
  • < previous
  • 1
  • ...
  • 573
  • 574
  • 575
  • 576
  • 577
  • 578
  • 579
  • 580
  • 581
  • ...
  • 720
  • next >
Top Stories
ಕಬ್ಬು ದರ ಹೆಚ್ಚಳಕ್ಕೆ ಕೇಂದ್ರಕ್ಕೆ ನಿಯೋಗ : ಸಿಎಂ
83 ವರ್ಷದಿಂದ ರಂಗಂಪೇಟೆ-ತಿಮ್ಮಾಪುರ ಸಂಘದ ಕನ್ನಡ ಸೇವೆ
ಹುಲಿ ದಾಳಿಗೆ ರೈತ ಬಲಿ: ಬಂಡೀಪುರ, ನಾಗರಹೊಳೆ ಸಫಾರಿ ಬಂದ್‌
ಕನ್ನಡಕ್ಕಾಗಿ ಕೈ ಎತ್ತಿದ್ದಕ್ಕಾಗಿ ಬಿತ್ತು 2000 ಕೇಸ್‌!
ಕಾನೂನಿಂದಷ್ಟೇ ಸಮಾಜ ನಡೆಯಲ್ಲ : ಭಾಗ್ವತ್‌
Asianet
Follow us on
  • Facebook
  • Twitter
  • YT video
  • insta
  • whatsapp
  • About Us
  • Terms of Use
  • Privacy Policy
  • CSAM Policy
  • Complaint Redressal - Website
  • Compliance Report Digital
  • Investors
  • Language Editions
  • newsable
  • മലയാളം(malayalam)
  • தமிழ்(tamil)
  • ಕನ್ನಡ(kannada)
  • తెలుగు(telugu)
  • বাংলা(bangla)
  • हिन्दी(hindi)
  • मराठी(marathi)
  • ಕನ್ನಡಪ್ರಭ(kannadaprabha)
Follow us on
  • Facebook
  • Twitter
  • YT video
  • insta
  • whatsapp
  • Popular Categories
  • ಭಾರತ
  • ಪ್ರಪಂಚ
  • ವಿಶೇಷ
  • ಮನರಂಜನೆ
© Copyright 2024 Asianxt Digital Technologies Private Limited (Formerly known as Asianet News Media & Entertainment Private Limited) | All Rights Reserved