ಕೊಂಕಣಿ ಅಕಾಡೆಮಿ ಗೌರವ ಪ್ರಶಸ್ತಿಗೆ ಮೂವರು, ಪುಸ್ತಕ ಪುರಸ್ಕಾರಕ್ಕೆ ಇಬ್ಬರ ಆಯ್ಕೆಕರ್ನಾಟಕ ಕೊಂಕಣಿ ಸಾಹಿತ್ಯ ಅಕಾಡೆಮಿ ವತಿಯಿಂದ ಕೊಡಮಾಡುವ 2024ನೇ ಸಾಲಿನ ಗೌರವ ಪ್ರಶಸ್ತಿಗೆ ಮೂವರು ಸಾಧಕರು ಹಾಗೂ ಪುಸ್ತಕ ಪುರಸ್ಕಾರಕ್ಕೆ ಇಬ್ಬರು ಸಾಹಿತಿಗಳನ್ನು ಆಯ್ಕೆ ಮಾಡಲಾಗಿದೆ. ಕೊಂಕಣಿ ಸಾಹಿತ್ಯ ಕ್ಷೇತ್ರದಲ್ಲಿ ಎಂ. ಪ್ಯಾಟ್ರಿಕ್ ಮೊರಾಸ್ ಮಂಗಳೂರು, ಕೊಂಕಣಿ ಕಲೆ ಕ್ಷೇತ್ರದಲ್ಲಿ ಜೊಯಲ್ ಪಿರೇರಾ ಮಂಗಳೂರು, ಕೊಂಕಣಿ ಜಾನಪದ ಕ್ಷೇತ್ರದಲ್ಲಿ ಸೊಬೀನಾ ಮೊತೇಶ್ ಕಾಂಬ್ರೆಕರ್ ಹಳಿಯಾಳ ಅವರನ್ನು ಆಯ್ಕೆ ಮಾಡಲಾಗಿದೆ.