ಧರ್ಮಸ್ಥಳದಲ್ಲಿ ಸಾಮೂಹಿಕ ಕೊಲೆ ಆರೋಪ ಆಧಾರರಹಿತ: ಡಾ। ಹೆಗ್ಗಡೆಕಳೆದ 2 ದಶಕಗಳಿಂದ ಧರ್ಮಸ್ಥಳದಲ್ಲಿ ಸೌಜನ್ಯ ಪ್ರಕರಣ ಸೇರಿದಂತೆ ಹಲವು ಕೊಲೆ, ಅತ್ಯಾಚಾರ, ಶವಗಳ ಹೂಳುವಿಕೆಯ ಬಗ್ಗೆ ಮಾಡಲಾಗುತ್ತಿರುವ ಆರೋಪಗಳನ್ನು ಧರ್ಮಸ್ಥಳ ಮಂಜುನಾಥಸ್ವಾಮಿ ದೇವಾಲಯದ ಧರ್ಮಾಧಿಕಾರಿ ವೀರೇಂದ್ರ ಹೆಗ್ಗಡೆ ಅವರು ತಳ್ಳಿಹಾಕಿದ್ದು, ‘ಅವುಗಳು ಸುಳ್ಳು ಮತ್ತು ಆಧಾರರಹಿತ’ ಎಂದು ಹೇಳಿದ್ದಾರೆ. ಜತೆಗೆ, ಸತ್ಯವನ್ನು ಬೆಳಗಿಕೆ ತರುವ ಸಲುವಾಗಿ ವಿಶೇಷ ತನಿಖಾ ತಂಡ ನಡೆಸುತ್ತಿರುವ ತನಿಖೆಯನ್ನು ಸ್ವಾಗತಿಸುವುದಾಗಿ ತಿಳಿಸಿದ್ದಾರೆ.