ಹೊರ ದೇಶದಲ್ಲೂ ಕಂಬಳ ನಡೆಸಲು ಚಿಂತನೆ: ಅಶೋಕ್ ಕುಮಾರ್ ರೈಕಂಬಳಕ್ಕೆ ಅದರದ್ದೇ ಆದ ಅಭಿಮಾನಿಗಳ ಬಳಗವಿದ್ದು, ಗ್ರಾಮೀಣ ಪ್ರದೇಶದ ಸ್ವಾಭಿಮಾನಿ ಕ್ರೀಡೆಯಾಗಿರುವ ಕಂಬಳವು ಯಾವುದೇ ಕಾರಣಕ್ಕೂ ನಿಲ್ಲುವುದಿಲ್ಲ. ಪೇಟಾದವರು ಏನೇ ಕಸರತ್ತು ಮಾಡಿದರೂ ಕಂಬಳವನ್ನು ನಿಲ್ಲಿಸಲು ಸಾಧ್ಯವಿಲ್ಲ. ಈಗಾಗಲೇ ರಾಜಧಾನಿ ಬೆಂಗಳೂರಿನಲ್ಲಿ ಯಶಸ್ವಿ ಕಂಬಳ ನಡೆಸಲಾಗಿದೆ, ಮುಂದೆ ಮುಂಬೈ, ಶಿವಮೊಗ್ಗದಲ್ಲೂ, ಸಾಧ್ಯವಾದರೆ ದುಬೈನಲ್ಲೂ ಕಂಬಳ ನಡೆಸಲಾಗುವುದು ಎಂದು ಪುತ್ತೂರು ಶಾಸಕ ಅಶೋಕ್ ಕುಮಾರ್ ರೈ ಹೇಳಿದ್ದಾರೆ.