ಮಂಗಳೂರು ಸೇರಿದಂತೆ ರಾಜ್ಯಾದ್ಯಂತ ಅಂಚೆ ಕಚೇರಿಗಳಲ್ಲಿ ಕಳೆದ ಎರಡು ದಿನಗಳಿಂದ ಸ್ಪೀಡ್ ಪೋಸ್ಟ್ ಸೇವೆ ಸ್ಥಗಿತಗೊಂಡಿದೆ. ಹೊಸ ಸಾಫ್ಟ್‌ವೇರ್ ಅಳವಡಿಕೆ ಬಳಿಕ ಈ ಸಮಸ್ಯೆ ತಲೆದೋರಿದ್ದು, ತುರ್ತು ಸ್ಪೀಡ್‌ಪೋಸ್ಟ್ ಸೌಲಭ್ಯ ಸಿಗದೆ ಗ್ರಾಹಕರು ತೊಂದರೆಗೆ ಒಳಗಾಗಿದ್ದಾರೆ.