ಅನಾಮಧೇಯ ವ್ಯಕ್ತಿಯೊಬ್ಬ ನೀಡಿದ ದೂರಿನ ಹಿನ್ನೆಲೆಯಲ್ಲಿ ತನಿಖೆ ನಡೆಸುತ್ತಿರುವ ಎಸ್‌ಐಟಿ ತಂಡ, ಉತ್ಖನನ ಕಾರ್ಯ ನಡೆಸುತ್ತಿದೆ. ಇದರ ಬೆನ್ನಲ್ಲೇ, ಇದೊಂದು ಕಮ್ಯುನಿಸ್ಟರು ರೂಪಿಸಿರುವ ‘ಟಾರ್ಗೆಟ್ ಧರ್ಮಸ್ಥಳ’ ಟೂಲ್ ಕಿಟ್ ಸಂಚು ಆಗಿದೆ ಎಂದು ಹಿಂದೂಪರ ಸಂಘಟನೆಗಳು ಕಿಡಿಕಾರಿದ್ದು, ಅಭಿಯಾನ ಆರಂಭಿಸಿವೆ.
ಫೇಸ್‌ಬುಕ್ ಸೇರಿದಂತೆ ಇನ್ನಿತರ ಜಾಲತಾಣದಲ್ಲಿ ಜನರನ್ನು ಧರ್ಮಸ್ಥಳ ವಿರುದ್ಧ ಎತ್ತಿಕಟ್ಟುತ್ತಿದ್ದಾರೆ ಎಂದು ಆರೋಪಿಸಿ ಸೌಜನ್ಯಾ ಪರ ಹೋರಾಟಗಾರರಾದ ಗಿರೀಶ್ ಮಟ್ಟೆಣ್ಣನವರ್ ಮತ್ತು ಮಹೇಶ್ ಶೆಟ್ಟಿ ತಿಮರೋಡಿ ವಿರುದ್ಧ ಬೆಳ್ತಂಗಡಿ ಠಾಣೆಯಲ್ಲಿ ದೂರು ದಾಖಲಾಗಿದೆ.