ಜಿಲ್ಲೆಯಲ್ಲಿ ಅಪರಾಧ ಕೃತ್ಯಗಳ ವಿರುದ್ಧ ಜಂಟಿ ಕಾರ್ಯಾಚರಣೆ: ನೂತನ ಪೊಲೀಸ್ ಕಮಿಷನರ್ ಸುಧೀರ್ ರೆಡ್ಡಿ ಖಡಕ್ ಮಾತುಮಂಗಳೂರಿನ ಪೊಲೀಸ್ ಕಮಿಷನರ್ ಕಚೇರಿಯಲ್ಲಿ ಶನಿವಾರ ತಮ್ಮನ್ನು ಭೇಟಿಯಾದ ಸುದ್ದಿಗಾರರ ಜತೆ ಮಾತನಾಡಿದ ಅವರು, ಕ್ರಿಮಿನಲ್‌ಗಳು ಜಿಲ್ಲೆಯ ಯಾವುದೇ ಮೂಲೆಯಲ್ಲಿ ಯಾವುದೇ ರೀತಿಯ ಅಪರಾಧ ಕೃತ್ಯ ಎಸಗಿದರೂ ಎಸ್ಪಿ, ಡಿಸಿಪಿಗಳ ಜತೆ ಜಂಟಿ ಕಾರ್ಯಾಚರಣೆ ಮೂಲಕ ಅಪರಾಧಿಗಳಿಗೆ ತಕ್ಕ ಉತ್ತರ ನೀಡಲಾಗುವುದು. ಈ ಕಾರ್ಯಾಚರಣೆ ಇತರ ಅಕ್ರಮ ಚಟುವಟಿಕೆಗಳಿಗೂ ಅನ್ವಯವಾಗಲಿದೆ ಎಂದವರು ಹೇಳಿದರು.