ಕಾರ್ನಾಡು ಅಮೃತಾನಂದಮಯಿ ನಗರದ ಕಾಂಕ್ರೀಟ್ ರಸ್ತೆ ಅವ್ಯವಸ್ಥೆಮೂಲ್ಕಿ ನಗರ ಪಂಚಾಯತ್ ವ್ಯಾಪ್ತಿಯ ಸುಮಾರು 80ಕ್ಕೂ ಹೆಚ್ಚು ಎಸ್ಸಿ/ ಎಸ್ಟಿ ಹಾಗೂ ಇತರೆ ಕುಟುಂಬಗಳು ವಾಸಿಸುತ್ತಿರುವ ಕಾರ್ನಾಡಿನ ಅಮೃತಾನಂದಮಯಿ ನಗರದಲ್ಲಿ ಮಳೆ ನೀರು ಹರಿದು ಹೋಗಲು ಸೂಕ್ತ ಚರಂಡಿ ವ್ಯವಸ್ಥೆ ಇಲ್ಲದೆ ಕಾಂಕ್ರೀಟ್ ರಸ್ತೆಯಲ್ಲಿ ನೀರು ಹರಿದು ರಸ್ತೆಗಳು ಪಾಚಿ ಹಿಡಿದಿದ್ದು ಅನೇಕರು ರಸ್ತೆಯಲ್ಲಿ ನಡೆದುಕೊಂಡು ಹೋಗುವಾಗ ಹಾಗು ಕೆಲವು ವಾಹನ ಸವಾರರು ವಾಹನ ನಿಯಂತ್ರಣ ತಪ್ಪಿ ಬಿದ್ದು ಗಾಯಗೊಂಡು ಆಸ್ಪತ್ರೆಗೆ ದಾಖಲಾಗಿ ಚಿಕಿತ್ಸೆ ಪಡೆದಿದ್ದಾರೆ.