ಶ್ರೀನಿವಾಸ ಕಲ್ಯಾಣೋತ್ಸವದ ಜೊತೆಗೆ ೧೦೦ ಜೋಡಿಗಳ ಉಚಿತ ವಿವಾಹ: ಪುತ್ತಿಲಈ ಬಾರಿ ಡಿ.೨೭, ೨೮ ಮತ್ತು ೨೯ರಂದು ಪುತ್ತೂರು ಮಹತೋಭಾರ ಶ್ರೀ ಮಹಾಲೀಂಗೇಶ್ವರ ದೇವಸ್ಥಾನದ ದೇವರಮಾರು ಗದ್ದೆಯಲ್ಲಿ ೩ನೇ ವರ್ಷದ ಶ್ರೀನಿವಾಸ ಕಲ್ಯಾಣೋತ್ಸವ ಜರುಗಲಿದ್ದು, ರಾಷ್ಟ್ರೀಯ ಸ್ವಯಂಸೇವಕ ಸಂಘಕ್ಕೆ ನೂರು ವರ್ಷ ಆಗುವ ಈ ಸಂದರ್ಭದಲ್ಲಿ ಶ್ರೀನಿವಾಸ ಕಲ್ಯಾಣೊತ್ಸವದ ಸ್ಥಳದಲ್ಲಿ ೧೦೦ ಜೋಡಿಗಳಿಗೆ ಸಾಮೂಹಿಕ ವಿವಾಹವನ್ನು ಮಾಡಬೇಕೆಂಬ ಯೋಜನೆ ರೂಪಿಸಲಾಗಿದೆ ಎಂದು ಪುತ್ತಿಲ ಪರಿವಾರ ಸೇವಾ ಟ್ರಸ್ಟ್ ಸಂಚಾಲಕ ಅರುಣ್ ಕುಮಾರ್ ಪುತ್ತಿಲ ತಿಳಿಸಿದ್ದಾರೆ.