ಸಾರಾಂಶ
ಪರಿಶಿಷ್ಟರಿಗೆ ಮೀಸಲಿರಿಸಿದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣವೇ ಮರಳಿಸಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ರವರನ್ನು ಅಮಾನತು ಮಾಡಬೇಕು. ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನದಲ್ಲಿ ಮೂಡಿರುವ ಗೊಂದಲ ನಿವಾರಿಸಬೇಕು.
ಕನ್ನಡಪ್ರಭ ವಾರ್ತೆ ಮಂಡ್ಯ
ಪರಿಶಿಷ್ಟ ಜಾತಿ, ಪರಿಶಿಷ್ಟ ಪಂಗಡಗಳ ಉಪಯೋಜನೆ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡಿರುವ ಸಮಾಜ ಕಲ್ಯಾಣ ಇಲಾಖೆ ಸಚಿವ ಎಚ್. ಸಿ. ಮಹದೇವಪ್ಪ ರಾಜೀನಾಮೆಗೆ ರಿಪಬ್ಲಿಕನ್ ಪಾರ್ಟಿ ಆಫ್ ಇಂಡಿಯಾ, ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ )ಕಾರ್ಯಕರ್ತರು ಒತ್ತಾಯಿಸಿ ಮೈಸೂರಿನಿಂದ ಬೆಂಗಳೂರಿನ ವಿಧಾನಸೌಧಕ್ಕೆ ತೆರಳುತ್ತಿರುವ ಕಾಲ್ನಡಿಗೆ ಜಾಥಾ ನಗರದಲ್ಲಿ ಸಾಗಿತು.ನಗರದ ಜಿಲ್ಲಾಧಿಕಾರಿ ಕಚೇರಿಯ ಭವ್ಯವನದಲ್ಲಿರುವ ಅಂಬೇಡರ್ ಪುತ್ಥಳಿಗೆ ಮಾಲಾರ್ಪಣೆ ಮಾಡಿ ಕಾಲ್ನಡಿಗೆ ಜಾಥಾ ತಂಡವನ್ನು ಜಿಲ್ಲೆಯ ದಸಂಸದ ಕೆಲವು ಕಾರ್ಯಕರ್ತರು ಸೇರಿಕೊಂಡರು.
ಪರಿಶಿಷ್ಟರಿಗೆ ಮೀಸಲಿರಿಸಿದ ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಅನುದಾನವನ್ನು ಗ್ಯಾರಂಟಿ ಯೋಜನೆಗೆ ಬಳಕೆ ಮಾಡುತ್ತಿರುವುದನ್ನು ನಿಲ್ಲಿಸಿ ತಕ್ಷಣವೇ ಮರಳಿಸಬೇಕು. ಸಮಾಜ ಕಲ್ಯಾಣ ಇಲಾಖೆ ಪ್ರಧಾನ ಕಾರ್ಯದರ್ಶಿ ಮಣಿವಣ್ಣನ್‌ರವರನ್ನು ಅಮಾನತು ಮಾಡಬೇಕು. ಸಮುದಾಯದ ಎಸ್‌ಎಸ್‌ಎಲ್‌ಸಿ, ಪಿಯುಸಿ ವಿದ್ಯಾರ್ಥಿಗಳ ಪ್ರೋತ್ಸಾಹ ಧನದಲ್ಲಿ ಮೂಡಿರುವ ಗೊಂದಲ ನಿವಾರಿಸಬೇಕು. ವಿದೇಶದಲ್ಲಿ ಉನ್ನತ ವ್ಯಾಸಂಗ ಮಾಡಲು ಅನುಕೂಲವಾಗುವ ಪ್ರಬುದ್ಧ ಯೋಜನೆಯನ್ನು ಸಮರ್ಪಕವಾಗಿ ಜಾರಿಗೊಳಿಸಬೇಕು ಎಂದು ಒತ್ತಾಯಿಸಿದರು.ಸಮಿತಿಯ ರಾಜ್ಯಾಧ್ಯಕ್ಷ ಡಾ. ಆರ್.ಮೋಹನ್‌ರಾಜು, ರಾಜು ಎಂ.ತಳವಾರ್, ಶೇಖರ್ ಹಾವಂಚೆ, ಸ್ವಪ್ನ, ಕೆ.ಬಿ.ರಾಜು, ಎ. ಚಿದಾನಂದ, ಜೆ ಸಿದ್ದರಾಜು ಇದ್ದರು.
;Resize=(128,128))
;Resize=(128,128))