ಸಾರಾಂಶ
ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎ.ಸರೋಜದೇವಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಸಮತಾ ಸೈನಿಕ ದಳ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ ತಿಳಿಸಿದರು. ರಾಮನಗರದಲ್ಲಿ ಸುದ್ದಿಗೋಷ್ಠಿಯಲ್ಲಿ ಮಾತನಾಡಿದರು.
ಕನ್ನಡಪ್ರಭ ವಾರ್ತೆ ರಾಮನಗರಸರ್ಕಾರಿ ಯೋಜನೆಗಳನ್ನು ಅರ್ಹ ಫಲಾನುಭವಿಗಳಿಗೆ ತಲುಪಿಸುವ ಮೂಲಕ ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎ.ಸರೋಜದೇವಿ ಪ್ರಮಾಣಿಕವಾಗಿ ಕೆಲಸ ಮಾಡುತ್ತಿದ್ದಾರೆ. ಅವರ ವಿರುದ್ಧ ಕೆಲವರು ಇಲ್ಲ ಸಲ್ಲದ ಆರೋಪ ಮಾಡುತ್ತಿರುವುದು ಖಂಡನೀಯ ಎಂದು ಸಮತಾ ಸೈನಿಕ ದಳ ಯುವ ಘಟಕದ ರಾಜ್ಯಾಧ್ಯಕ್ಷ ಡಾ.ಜಿ.ಗೋವಿಂದಯ್ಯ ತಿಳಿಸಿದರು.
ನಗರದ ಪ್ರವಾಸಿ ಮಂದಿರದಲ್ಲಿ ದಲಿತ ಸಂಘಟನೆಗಳ ಒಕ್ಕೂಟದ ವತಿಯಿಂದ ಆಯೋಜಿಸಲಾಗಿದ್ದ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, ಡಾ.ಬಿ.ಆರ್. ಅಂಬೇಡ್ಕರ್ ಅಭಿವೃದ್ಧಿ ನಿಗಮದ ಜಿಲ್ಲಾ ವ್ಯವಸ್ಥಾಪಕಿ ಎ.ಸರೋಜದೇವಿ ದಕ್ಷ ಮತ್ತು ಪ್ರಾಮಾಣಿಕ ಅಧಿಕಾರಿ. ಅಂತಹವರ ವಿರುದ್ಧ ಹಬ್ಬಿಸಲಾಗುತ್ತಿರುವ ಸುಳ್ಳು ವದಂತಿ ವಿಷಯಕ್ಕೆ ತೆರೆ ಎಳೆಯುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳನ್ನು ಭೇಟಿ ಮಾಡಿ ಮನವಿ ಮಾಡಿದ್ದೇವೆ ಎಂದರು.ಕಳೆದ ಶುಕ್ರವಾರ ನಡೆದ ಕೆಡಿಪಿ ಸಭೆಯಲ್ಲಿ ಕೆಲ ಸದಸ್ಯರು ಡಾ: ಬಿ.ಆರ್.ಅಂಬೇಡ್ಕರ್ ಅಭಿವೃದ್ಧಿ ನಿಗಮದಿಂದ ಯಾವುದೇ ಕೆಲಸ ಕಾರ್ಯಗಳು ನಡೆಯುತ್ತಿಲ್ಲ. ಜಿಲ್ಲಾ ವ್ಯವಸ್ಥಾಪಕರವನ್ನು ವರ್ಗಾವಣೆ ಮಾಡುವಂತೆ ಸಭೆಯಲ್ಲಿ ಚರ್ಚಿಸಿರುವುದು ನೋವಿನ ಸಂಗತಿ ಎಂದು ಹೇಳಿದರು.
ಸರೋಜ ದೇವಿ ಅವರು ಪರಿಶಿಷ್ಟ ಜನಾಂಗದ ಹೆಣ್ಣು ಮಗಳಾಗಿ ಜಿಲ್ಲಾ ಮಟ್ಟದ ಅಧಿಕಾರಿಯಾಗಿ ರಾಜ್ಯಾದ್ಯಯಂತ ಜನಮನ್ನಣೆ ಪಡೆದು ಹಲವಾರು ಸಂಘ ಸಂಸ್ಥೆಗಳಿಂದ ಪ್ರಶಂಸೆಗೆ ಪಾತ್ರರಾಗಿರುತ್ತಾರೆ. ಅಂತಹ ಅಧಿಕಾರಿಗೆ ಪ್ರೋತ್ಸಾಹ ನೀಡಬೇಕೇ ಹೊರತು ಟೀಕೆ ಮಾಡಬಾರದು ಎಂದು ಗೋವಿಂದಯ್ಯ ಹೇಳಿದರು.ಸುದ್ದಿಗೋಷ್ಠಿಯಲ್ಲಿ ದಲಿತ ಮುಖಂಡ ಶಿವಶಂಕರ್ ಸಂಘಟನೆಯ ಮುಖಂಡರಾದ ಹರೀಶ್ ಬಾಲು, ಬನಶಂಕರಿ ನಾಗು, ಗುಡ್ಡೆ ವೆಂಕಟೇಶ್ ಗ್ರಾಪಂ ಸದಸ್ಯ ಚಿಕ್ಕರಾಜು, ಶಿವಪ್ರಕಾಶ್, ರುದ್ರೇಶ್ , ಪ್ರಕಾಶ್ ಮತ್ತಿತರರು ಹಾಜರಿದ್ದರು.