ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಯನ್ನು ಗಲ್ಲು ಶಿಕ್ಷೆ ಜೊತೆಗೆ ಅದಕ್ಕೆ ಸಹಕರಿಸಿದ ಎಲ್ಲರನ್ನೂ ಸಹ ಜೀವಾವಧಿ ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು.
ಕನ್ನಡಪ್ರಭ ವಾರ್ತೆ ಕೊರಟಗೆರೆ
ಗರ್ಭಿಣಿ ಮಗಳನ್ನೇ ಕೊಂದ ಪಾಪಿ ತಂದೆಯನ್ನು ಗಲ್ಲು ಶಿಕ್ಷೆ ಜೊತೆಗೆ ಅದಕ್ಕೆ ಸಹಕರಿಸಿದ ಎಲ್ಲರನ್ನೂ ಸಹ ಜೀವಾವಧಿ ಶಿಕ್ಷೆ ನೀಡಬೇಕೆಂದು ದಲಿತ ಪರ ಸಂಘಟನೆಗಳ ಒಕ್ಕೂಟ ಆಗ್ರಹಿಸಿ ತಹಸೀಲ್ದಾರ್ ಮೂಲಕ ಸರ್ಕಾರಕ್ಕೆ ಮನವಿ ಸಲ್ಲಿಸಿದರು. ಹುಬ್ಬಳ್ಳಿ ತಾಲೂಕಿನ ಇನಾಂ ವೀರಾಪುರ ಗ್ರಾಮದ ಯುವತಿ ಅಂತರ್ಜಾತಿ ವಿವಾಹ ಆಗಿದ್ದಕ್ಕೆ ೭ ತಿಂಗಳು ತುಂಬು ಗರ್ಭಿಣಿ ಎನ್ನುವುದನ್ನು ನೋಡದೆ ಭೀಕರವಾಗಿ ಕೊಲೆ ಮಾಡಿರುವುದನ್ನು ದಲಿತ ಪರ ಸಂಘಟನೆಗಳ ಒಕ್ಕೂಟ ತೀವ್ರವಾಗಿ ಖಂಡಿಸುತ್ತದೆ. ಹತ್ಯೆ ಮಾಡಿದ ತಂದೆಗೆ ವಿಶೇಷ ಕಾನೂನು ರಚನೆ ಮಾಡಿ ಮೂಲಕ ಗಲ್ಲು ಶಿಕ್ಷೆ ನೀಡುವಂತೆ ಸರ್ಕಾರಕ್ಕೆ ಒತ್ತಾಯಿಸಿದರು.ದಲಿತ ಮುಖಂಡ ದಾಡಿ ವೆಂಕಟೇಶ್, ದಲಿತ ಸಂರಕ್ಷಣಾ ಸಮಿತಿ ರಾಜ್ಯ ಸಂಚಾಲಕ ಟೈಗರ್‌ನಾಗ್ ಮಾತನಾಡಿ, ಧಾರವಾಡ ಜಿಲ್ಲೆ ಹುಬ್ಬಳ್ಳಿ ತಾಲೂಕಿನಲ್ಲಿ ತಂದೆಯ ಮಗಳನ್ನು ವಿಕೃತವಾಗಿ ಕೊಲೆ ಮಾಡಿ ನಂತರ ದಲಿತ ಸಮುದಾಯ ಯುವಕನ ಕುಟುಂಬದ ಮೇಲೆ ಹಲ್ಲೆ ನಡೆಸಿದ್ದಾರೆ. ಬಸವಣ್ಣನವರು ಸಮ ಸಮಾಜ ನಿರ್ಮಾಣಕ್ಕೆ ಸಂದೇಶ ನೀಡಿದ್ದರು ಘೋರ ಘಟನೆಗಳು ರಾಜ್ಯದಲ್ಲಿ ನಡೆಯುತ್ತಲೆ ಇವೆ. ಈ ಪ್ರಕರಣಕ್ಕೆ ಗೃಹ ಇಲಾಖೆ ವಿಶೇಷ ಕಾನೂನು ರಚಿಸಿ ಪಾಪಿ ತಂದೆಗೆ ಗಲ್ಲು ಶಿಕ್ಷೆ ಸಿಗುವಂತೆ ಮಾಡಿ ದಲಿತ ಕುಟುಂಬಕ್ಕೆ ನ್ಯಾಯ ಒದಗಿಸಬೇಕಿದೆ ಎಂದರು.ಈ ಸಂದರ್ಭದಲ್ಲಿ ದಲಿತ ಪರ ಸಂಘಟನೆಯ ಗೋಪಿನಾಥ್, ಪುಟ್ಟಸಂದ್ರ ಭೀಮಣ್ಣ, ಕಾಮರಾಜನಹಳ್ಳಿ ದೊಡ್ಡಯ್ಯ, ಗೊಲ್ಲಹಳ್ಳಿ ನಾಗಣ್ಣ, ಪುಟ್ಟರಾಜು, ಗೊಂದಿಹಳ್ಳಿ ಭೀಮರಾಜು ಸೇರಿದಂತೆ ಇತರರು ಹಾಜರಿದ್ದರು.