ಸಿ.ರಾಜಣ್ಣ ಯರಿಯೂರು ಮಾತನಾಡಿ, ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಐತಿಹಾಸಿಕ ದಿನ ಅಂಗವಾಗಿ ಅವರ ಹೋರಾಟವನ್ನು ಮುಂದುವರಿಸುವ ಸಲುವಾಗಿ ಮನುಸ್ಮೃತಿ ಸುಡುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.
ಕನ್ನಡಪ್ರಭ ವಾರ್ತೆ ಚಾಮರಾಜನಗರ
ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಐತಿಹಾಸಿಕ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಹಾಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದಲ್ಲಿ ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ ನಡೆಸಲಾಯಿತು.ನಗರದ ಭುವನೇಶ್ವರಿ ವೃತ್ತದಲ್ಲಿ ಜಮಾಯಿಸಿದ ಪ್ರತಿಭಟನಾನಿರತರು ಮನುಸ್ಮೃತಿ ಪ್ರತಿಯನ್ನು ಸುಡಲು ಮುಂದಾಗ ಪೋಲಿಸರು ತಡೆದರು. ನಂತರ ಪ್ರತಿಭಟನಾನಿರತರು ಮನುಸ್ಮೃತಿ ಪ್ರತಿ ಹರಿದು ಅಕ್ರೋಶ ವ್ಯಕ್ತಪಡಿಸಿದರು.ಈ ಸಂದರ್ಭದಲ್ಲಿ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ಸಿ.ರಾಜಣ್ಣ ಯರಿಯೂರು ಮಾತನಾಡಿ, ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಐತಿಹಾಸಿಕ ದಿನ ಅಂಗವಾಗಿ ಅವರ ಹೋರಾಟವನ್ನು ಮುಂದುವರಿಸುವ ಸಲುವಾಗಿ ಮನುಸ್ಮೃತಿ ಸುಡುವ ಪ್ರತಿಭಟನೆ ಹಮ್ಮಿಕೊಳ್ಳಲಾಗಿದೆ ಎಂದರು.ಶ್ರೇಣಿಕೃತ ಜಾತಿ ವ್ಯವಸ್ಥೆಗೆ ಮುನ್ನಡಿ ಬರೆದು ಭಾರತವನ್ನು ಅಂಧಕಾರಕ್ಕೆ ತಳ್ಳಿದ್ದ ಮನುಸ್ಮೃತಿಯನ್ನು ಬಾಬಾ ಸಾಹೇಬ್ ಡಾ.ಬಿ.ಆರ್. ಅಂಬೇಡ್ಕರ್ ಅವರು ಸುಟ್ಟು ಹಾಕಿ 98 ವರ್ಷಗಳಾದವು. ಜಾತಿ ಅಸಮಾನತೆ, ಲಿಂಗ ತಾರತಮ್ಯ, ಮಹಿಳೆಯರ ಮೇಲಿನ ದಬ್ಬಾಳಿಕೆ, ಬಹುಜನರ ಮೇಲೆ ದೌರ್ಜನ್ಯ, ಸತಿಸಹಗಮನ ಪದ್ಧತಿ, ಬಾಲ್ಯ ವಿವಾಹ, ಬೆತ್ತಲೆಸೇವೆ, ದೇವದಾಸಿ ಪದ್ಧತಿ, ಶೂದ್ರಾತಿಶೂದ್ರರಿಗೆ ಅಕ್ಷರ ಜ್ಞಾನ ನಿಷಿದ್ದ ಮುಂತಾದ ಅನಿಷ್ಟ ಪದ್ಧತಿಗಳು ಶತಮಾನಗಳ ಕಾಲ ಮುಂದುವರಿಯಲು ಕಾರಣವಾದ ’ಮನುಸ್ಮೃತಿ’ಯನ್ನು ಡಾ. ಬಿ.ಆರ್. ಅಂಬೇಡ್ಕರ್ ಅವರು 1927ರ ಡಿಸೆಂಬರ್ 25ರಂದು ಸಾರ್ವಜನಿಕವಾಗಿ ಸುಟ್ಟು ಹಾಕಿದ್ದರು ಎಂದರು.ಸ್ವಾತಂತ್ರ್ಯ ಭಾರತಕ್ಕೆ ಸಂವಿಧಾನವನ್ನು ರೂಪಿಸುವ ಸಂದರ್ಭದಲ್ಲಿ ಸಮಸಮಾಜದ ನಿರ್ಮಾಣದ ಕನಸು ಹೊತ್ತು, ಸಮಾನತೆ, ಸಹೋದರತೆ, ಭ್ರಾತೃತ್ವದ ಆಶಯದೊಂದಿಗೆ ಸಂವಿಧಾನವನ್ನು ರೂಪಿಸಿಕೊಂಡೆವು. ಈ ಸಂವಿಧಾನ ರಚನೆಗೆ ಬಾಬಾ ಸಾಹೇಬರ ಕೊಡುಗೆ ಆಗಾಧ .ಆದರೆ ಸಂವಿಧಾನ ಸಮರ್ಪಣೆಯಾದ ಸಂದರ್ಭದಲ್ಲಿ ಆರ್.ಎಸ್.ಎಸ್. ನ ಮುಖವಾಣಿ ಆರ್ಗನೈಸರ್ ಪತ್ರಿಕೆಯು ನಮ್ಮ ಸಂವಿಧಾನದ ಮೇಲೆ ಅಸಹನೆಯನ್ನು ಹೊರಹಾಕಿತ್ತು. ಈ ಸಂವಿಧಾನದಲ್ಲಿ ಭಾರತೀಯತೆ ಇಲ್ಲ. ಸಂವಿಧಾನ ರಚನೆಕಾರರು ಮನುಸ್ಮೃತಿಯನ್ನು ಗಣನೆಗೆ ತೆಗೆದುಕೊಂಡಿಲ್ಲ ಎಂದು ಮೂದಲಿಸಲಾಗಿತ್ತು ಎಂದರು, ಈಗಲೂ ಪರಿಸ್ಥಿತಿ ಬದಲಾಗಿಲ್ಲ. ಆರ್.ಎಸ್.ಎಸ್. ಮತ್ತು ಅದರ ರಾಜಕೀಯ ಪಕ್ಷವಾದ ಬಿ.ಜೆ.ಪಿ.ಯು ಅಂದಿನಿಂದ ಇಂದಿನವರೆಗೂ ಅಂತರಿಕವಾಗಿ ಬಹಿರಂಗವಾಗಿಯೂ ಡಾ. ಅಂಬೇಡ್ಕರ್ ಅವರ ಮೇಲೆ, ಸಂವಿಧಾನದ ಮೇಲೆ ಅಸಹಿಷ್ಣುತೆಯನ್ನು ಹೊರಹಾಕುತ್ತಲೇ ಬಂದಿದೆ ಎಂದು ಆರೋಪಿಸಿದರು. ಸಂವಿಧಾನ ಮತ್ತು ಪ್ರಜಾಪ್ರಭುತ್ವ ವ್ಯವಸ್ಥೆಯನ್ನು ರಕ್ಷಣೆ ಮಾಡಿಕೊಳ್ಳುವ ಕಾರಣಕ್ಕಾಗಿ ಬಾಬಾ ಸಾಹೇಬರು ಮನುಸ್ಮೃತಿಯನ್ನು ದಹಿಸಿದ ದಿನವಾದ ಡಿ. 25ರಂದು ಸಾಂಕೇತಿಕವಾಗಿ ನಾವೂ ಕೂಡ ಮನುಸ್ಮೃತಿಯನ್ನು ಸುಟ್ಟುಹಾಕುವ ಮೂಲಕ ಬಾಬಾ ಸಾಹೇಬ್ ಅಂಬೇಡ್ಕರ್‌ರವರ ಹೋರಾಟವನ್ನು ಮುಂದುವರಿಸೋಣ ಎಂದರು.ಪ್ರತಿಭಟನೆಯಲ್ಲಿ ಎಸ್ ಡಿಪಿಐ ಜಿಲ್ಲಾಧ್ಯಕ್ಷ ಕಲೀಲ್ ಉಲ್ಲಾ, ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕರಾದ ಸಿ.ಎಂ.ಶಿವಣ್ಣ, ಕೆರೆಹಳ್ಳಿ ಬಸವರಾಜು, ಮಹಿಳಾ ಸಂಯೋಜಕಿ ಎಂ.ಆರ್.ಪ್ರಭಾವತಿ, ಜನಶಕ್ತಿ ಸುರೇಶ್, ಸಂಘಟನಾ ಸಂಚಾಲಕರಾದ ಶಿವಕುಮಾರ್, ಸಿ.ರಂಗಸ್ವಾಮಿ, ನಂಜುಂಡಸ್ವಾಮಿ, ತಾಲೂಕು ಅಧ್ಯಕ್ಷರಾದ ರಂಗಸ್ವಾಮಿ ಮಾಡ್ರಹಳ್ಳಿ, ಶಾಂತರಾಜು, ಇದಾಯತ್ ಷರೀಫ್, ಸಾಹಿತಿ ಸಿದ್ದರಾಜು, ಆಟೋ ಉಮೇಶ್, ಇತರರು ಭಾಗವಹಿಸಿದ್ದರು.--------೨೫ಸಿಎಚ್‌ಎನ್೧ಅಂಬೇಡ್ಕರ್ ಅವರು ಮನುಸ್ಮೃತಿಯನ್ನು ಸುಟ್ಟ ಐತಿಹಾಸಿಕ ದಿನದ ಅಂಗವಾಗಿ ದಲಿತ ಸಂಘರ್ಷ ಸಮಿತಿಗಳ ಒಕ್ಕೂಟ ಗೂ ಪ್ರಗತಿಪರ ಸಂಘಟನೆಗಳ ವತಿಯಿಂದ ನಗರದಲ್ಲಿ ಮನುಸ್ಮೃತಿ ಪ್ರತಿ ಹರಿದು ಪ್ರತಿಭಟನೆ ನಡೆಸಲಾಯಿತು.------------