ಸಾರಾಂಶ
ಚಿತ್ರದುರ್ಗ: ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ರಾಜ್ಯದಲ್ಲಿ ಸುಗ್ರಿವಾಜ್ಞೆ ಮೂಲಕ ಒಳ ಮೀಸಲಾತಿ ಜಾರಿಗೊಳಿಸುವುದು ಮತ್ತು ರಾಜ್ಯದ ವಿವಿಧ ಇಲಾಖೆಗಳಲ್ಲಿ ಇರುವ ಬ್ಯಾಕ್‌ಲಾಗ್ ಹುದ್ದೆಗಳನ್ನು ಭರ್ತಿಮಾಡುವುದೂ ಸೇರಿದಂತೆ ಹಲವು ಬೇಡಿಕೆಗಳನ್ನು ಸರ್ಕಾರವು ಕೂಡಲೇ ಜಾರಿಗೊಳಿಸುವಂತೆ ಕರ್ನಾಟಕ ದಲಿತ ಸಂಘರ್ಷ ಸಮಿತಿಯ ರಾಜ್ಯಾಧ್ಯಕ್ಷ ಎಚ್.ಮಹಂತೇಶ್ ಒತ್ತಾಯ ಮಾಡಿದರು.

ಶನಿವಾರ ಚಿತ್ರದುರ್ಗಕ್ಕೆ ಭೇಟಿ ನೀಡಿದ್ದ ಅನುಸೂಚಿತ ಜಾತಿ ಮತ್ತು ಪಂಗಡಗಳ ಕಲ್ಯಾಣ ಸಮಿತಿ ಅಧ್ಯಕ್ಷ ಹಾಗೂ ಶಾಸಕ ಪಿ.ಎಂ.ನರೇಂದ್ರಸ್ವಾಮಿ ಅವರನ್ನು ಭೇಟಿ ಮಾಡಿ ಮನವಿ ಪತ್ರ ಸಲ್ಲಿಸಿದ ಮಹಂತೇಶ್, ರಾಜ್ಯದ ಗ್ರಾಮೀಣ ಭಾಗದಲ್ಲಿನ ಎಸ್‌ಸಿ ಕಾಲೋನಿಗಳಲ್ಲಿ ಅಕ್ರಮವಾಗಿ ಮದ್ಯ ಮಾರಾಟ ಮಾಡುವವರ ವಿರುದ್ಧ ಕಠಿಣ ಕ್ರಮ ತೆಗೆದುಕೊಳ್ಳಬೇಕು ಎಂದು ಆಗ್ರಹಿಸಿದರು.ಸಮಾಜ ಕಲ್ಯಾಣ ಇಲಾಖೆಯ ಆಶ್ರಯದಲ್ಲಿ ನಡೆಯುತ್ತಿರುವ ಹಾಸ್ಟೆಲುಗಳಲ್ಲಿ ವಿದ್ಯಾರ್ಥಿಗಳ ಮೇಲೆ ಇತ್ತೀಚೆಗೆ ದೌರ್ಜನ್ಯದ ಪ್ರಕರಣಗಳು ಹೆಚ್ಚುತ್ತಿದ್ದು ಅಧಿಕಾರಿಗಳ ವಿರುದ್ಧ ಕ್ರಮಕ್ಕೆ ಮುಂದಾಗಬೇಕು ಎಂದರು.ತಾಲ್ಲೂಕಿನ ಕಸಬಾ ಹೋಬಳಿ, ಬೊಮ್ಮೇನಹಳ್ಳಿ ಗ್ರಾಮದಲ್ಲಿ ಹೆಚ್ಚಾಗಿ ಪರಿಶಿಷ್ಟ ಜಾತಿಯ ಜನ ವಾಸ ಮಾಡಲು ಅನುಕೂಲವಾಗುವಂತೆ ೩ ಎಕರೆ ಜಮೀನು ಮಂಜೂರು ಮಾಡಬೇಕು ಎಂದೂ ಸಹ ಅವರು ಒತ್ತಾಯಿಸಿದರು.