ಸಾರಾಂಶ
ಕನ್ನಡಪ್ರಭವಾರ್ತೆ ನಾಗಮಂಗಲ
ತಾಲೂಕಿನ ಆದಿಚುಂಚಗಿರಿ ಮಹಾಸಂಸ್ಥಾನಮಠದ ಶ್ರೀ ಕಾಲಭೈರವೇಶ್ವರ ಸ್ವಾಮಿ ಸನ್ನಿಧಿಯಲ್ಲಿ ಸೋಮವಾರ ಬೆಳಗ್ಗೆ ನಡೆದ ಅಮಾವಾಸ್ಯೆ ವಿಶೇಷ ಪೂಜಾ ಕಾರ್ಯದಲ್ಲಿ ಮಾಜಿ ಸಚಿವ ಹಾಗೂ ಶಾಸಕ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ ಮತ್ತು ಹಾಸನ ಲೋಕಸಭಾ ಜೆಡಿಎಸ್ ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಪಾಲ್ಗೊಂಡು ದೇವರ ದರ್ಶನಾಶೀರ್ವಾದ ಪಡೆದುಕೊಂಡರು.ಶ್ರೀಮಠದ ಪೀಠಾಧ್ಯಕ್ಷ ಡಾ. ನಿರ್ಮಲಾನಂದನಾಥಶ್ರೀಗಳ ನೇತೃತ್ವದಲ್ಲಿ ನಡೆದ ಪೂಜಾ ಕಾರ್ಯಕ್ರಮದಲ್ಲಿ ಎಚ್.ಡಿ.ರೇವಣ್ಣ ಕುಟುಂಬಸ್ಥರು ಕ್ಷೇತ್ರಪಾಲಕ ಶ್ರೀ ಕಾಲಭೈರವೇಶ್ವರಸ್ವಾಮಿ ಸೇರಿದಂತೆ ಎಲ್ಲಾ ದೇವರುಗಳಿಗೆ ವಿಶೇಷ ಪೂಜೆ ಸಲ್ಲಿಸಿ ದರ್ಶನಾಶೀರ್ವಾದ ಪಡೆದರು. ಅಲ್ಲದೇ ಭೈರವೈಕ್ಯಶ್ರೀ ಡಾ.ಬಾಲಗಂಗಾಧರನಾಥ ಸ್ವಾಮೀಜಿಯವರ ಮಹಾಸಮಾಧಿಗೆ ಪೂಜೆ ಸಲ್ಲಿಸಿದರು.
ಶ್ರೀಕಾಲಭೈರವೇಶ್ವರನಿಗೆ ಅಮಾವಾಸ್ಯೆ ಪ್ರಯುಕ್ತ ಜರುಗುವ ಪಂಚಾಮೃತಾಭಿಕಷೇಕ, ಭಸ್ಮಾಭಿಷೇಕ, ಬಿಲ್ವಾಭಿಷೇಕ, ಪುಷ್ಪಾಭಿಷೇಕ ಹಾಗೂ ಸುಗಂಧ ದ್ರವ್ಯಾಗಳೊಂದಿಗೆ ಶ್ರೀಗಳು ಪೂಜೆ ನರೆವೇರಿಸಿದರು. ಅಪಾರ ಸಂಖ್ಯೆಯಲ್ಲಿ ಭಕ್ತರೂ ಕೂಡ ಆಗಮಿಸಿದ್ದರು.ಅಮಾವಾಸ್ಯೆ ಪೂಜೆಗೆ ಆಗಮಿಸಿದ ಮಾಜಿ ಸಚಿವ ಎಚ್.ಡಿ.ರೇವಣ್ಣ, ಪತ್ನಿ ಭವಾನಿ ರೇವಣ್ಣ, ಅಭ್ಯರ್ಥಿ ಪ್ರಜ್ವಲ್‌ರೇವಣ್ಣ ಹಾಗೂ ಮಾಜಿ ಶಾಸಕ ಸುರೇಶ್‌ಗೌಡರಿಗೆ ಶ್ರೀ ಮಠದ ಸಂಪ್ರದಾಯದಂತೆ ಶಾಲು ಹೊದಿಸಿ ಹೂ ಮಾಲೆ ಹಾಕಿ ಶ್ರೀಗಳು ಆಶೀರ್ವದಿಸಿದರು.
ಏ.೧೪ರಂದು ಶ್ರಮಿಕ ಜನರ ಸ್ವಾಭಿಮಾನಿ ಗೆಲುವಿನ ಸಮಾವೇಶಮಂಡ್ಯ: ಜಿಲ್ಲಾ ಶ್ರಮಿಕ ನಗರ ನಿವಾಸಿಗಳ ಒಕ್ಕೂಟದಿಂದ ಏ.೧೪ರಂದು ಬೆಳಗ್ಗೆ ೧೧.೩೦ಕ್ಕೆ ನಗರದ ರೈತ ಸಭಾಂಗಣದಲ್ಲಿ ಶ್ರಮಿಕ ಜನರ ಸ್ವಾಭಿಮಾನಿ ಗೆಲುವಿನ ಸಮಾವೇಶ ಏರ್ಪಡಿಸಲಾಗಿದೆ.ಉದಾಟನೆಯನ್ನು ನಿವೃತ್ತ ಪ್ರಾಂಶುಪಾಲ ಎಂ.ವಿ.ಕೃಷ್ಣ ಉದ್ಘಾಟಿಸುವರು. ಅಧ್ಯಕ್ಷತೆಯನ್ನು ವಕೀಲ ಬಿ.ಟಿ.ವಿಶ್ವನಾಥ್ ವಹಿಸುವರು. ಹಿರಿಯ ಬರಹಗಾರ್ತಿ ವಿಜಯಮ್ಮ ಮುಖ್ಯ ಭಾಷಣಕಾರರಾಗಿ ಆಗಮಿಸಲಿದ್ದು, ಚಿಂತಕ ಡಾ.ಎಚ್.ವಿ.ವಾಸು, ಕುಮಾರ್ ಸಮತಳ ವಿಚಾರ ಮಂಡಿಸುವರು. ಅಂದು ಬೆಳಗ್ಗೆ ೧೦ ಗಂಟೆಗೆ ಕಾಳಿಕಾಂಬ ಶ್ರಮಿಕ ನಗರದ ಆವರಣದಿಂದ ರೈತಸಭಾಂಗಣದವರೆಗೆ ಮೆರವಣಿಗೆ ನಡೆಸಲಾಗುವುದು.