ದಾನಮ್ಮ ಕರಿಗಾರ 3ನೇ ಬಾರಿ ರಾಜ್ಯಮಟ್ಟಕ್ಕೆ ಆಯ್ಕೆ

| Published : Oct 27 2024, 02:29 AM IST

ಸಾರಾಂಶ

ಕನ್ನಡಪ್ರಭ ವಾರ್ತೆ ಕೊಲ್ಹಾರ: ಪಟ್ಟಣದ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿ ದಾನಮ್ಮ ಕರಿಗಾರ ವಿಜಯಪುರ ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಹಾಗೂ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಸತತ ಮೂರನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.

ಕನ್ನಡಪ್ರಭ ವಾರ್ತೆ ಕೊಲ್ಹಾರ: ಪಟ್ಟಣದ ಸಂಗಮೇಶ್ವರ ಪ್ರೌಢ ಶಾಲೆಯ ವಿದ್ಯಾರ್ಥಿನಿ ದಾನಮ್ಮ ಕರಿಗಾರ ವಿಜಯಪುರ ನಗರದ ಅಂಬೇಡ್ಕರ್ ಜಿಲ್ಲಾ ಕ್ರೀಡಾಂಗಣದಲ್ಲಿ ಜರುಗಿದ ಪ್ರಾಥಮಿಕ ಹಾಗೂ ಪ್ರೌಢ ಶಾಲೆಗಳ ಜಿಲ್ಲಾ ಮಟ್ಟದ ಅಥ್ಲೆಟಿಕ್ಸ್‌ ಕ್ರೀಡಾಕೂಟದಲ್ಲಿ ಭಾಗವಹಿಸಿ 100 ಹಾಗೂ 200 ಮೀ. ಓಟದಲ್ಲಿ ದ್ವಿತೀಯ ಸ್ಥಾನ ಪಡೆದು ಸತತ ಮೂರನೇ ಬಾರಿಗೆ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಾಳೆ.ಈ ಹಿಂದೆ ಕಳೆದ ಎರಡು ವರ್ಷಗಳು ಕೂಡ ದಾನಮ್ಮ ಜಿಲ್ಲಾ ಮಟ್ಟದ ಓಟದ ಸ್ಪರ್ಧೆಗಳಲ್ಲಿ ಭಾಗವಹಿಸಿ ರಾಜ್ಯ ಮಟ್ಟಕ್ಕೆ ಆಯ್ಕೆಯಾಗಿದ್ದಳು. ಈ ಬಾರಿ 9ನೇ ತರಗತಿಯಲ್ಲಿ ಓದುತ್ತಿದ್ದು, ಉತ್ತಮ ಸಾಧನೆ ಮಾಡಿದ್ದಾಳೆ. ಪ್ರಾಥಮಿಕ ಶಾಲೆಯ ಬನಶ್ರೀ ಗೊಕಾವಿ 400 ಮೀ ಓಟದಲ್ಲಿ ಭಾಗವಹಿಸಿ ತೃತೀಯ ಸ್ಥಾನ ಪಡೆದಿದ್ದಾಳೆ.ದಾನಮ್ಮಳ ಸಾಧನೆಗೆ ಸಂಘದ ಅಧ್ಯಕ್ಷ ಬಿ.ಯು.ಗಿಡ್ಡಪ್ಪಗೋಳ, ಕಾರ್ಯದರ್ಶಿ ಎಸ್.ಬಿ.ಪತಂಗಿ, ಆಡಳಿತ ಮಂಡಳಿಯ ಸದಸ್ಯರು, ಶಾಲೆಯ ಮುಖ್ಯ ಶಿಕ್ಷಕ ಆರ್.ಕೆ.ಉಮರಾಣಿ, ವೈ.ಜಿ.ಶಿರೋಳ, ದೈಹಿಕ ಶಿಕ್ಷಕ ಮಲ್ಲಿಕಾರ್ಜುನ ಕುಬಕಡ್ಡಿ ಸೇರಿ ಶಾಲೆಯ ಸಿಬ್ಬಂದಿ ಪಾಲಕರು, ಕ್ರೀಡಾಭಿಮಾನಿಗಳು ಅಭಿನಂದನೆ ಸಲ್ಲಿಸಿದ್ದಾರೆ.