ಹಾಸನಾಂಬ ಜಾತ್ರೆಯಲ್ಲಿ ನೃತ್ಯ ವೈಭವ ಐತಿಹಾಸಿಕ: ಸಂಸದ ಶ್ರೇಯಸ್ ಎಂ.ಪಟೇಲ್

| Published : Oct 26 2024, 12:48 AM IST

ಹಾಸನಾಂಬ ಜಾತ್ರೆಯಲ್ಲಿ ನೃತ್ಯ ವೈಭವ ಐತಿಹಾಸಿಕ: ಸಂಸದ ಶ್ರೇಯಸ್ ಎಂ.ಪಟೇಲ್
Share this Article
  • FB
  • TW
  • Linkdin
  • Email

ಸಾರಾಂಶ

ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು. ಹಾಸನದಲ್ಲಿ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಹಾಸನಾಂಬ ನೃತ್ಯ ವೈಭವದ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮ

ಕನ್ನಡಪ್ರಭ ವಾರ್ತೆ ಹಾಸನ

ಹಾಸನಾಂಬ ಜಾತ್ರೋತ್ಸವದ ಇತಿಹಾಸದಲ್ಲಿ ಇದೇ ಮೊದಲ ಬಾರಿಗೆ ಜಿಲ್ಲಾಡಳಿತದಿಂದ ನೃತ್ಯ ವೈಭವ ಕಾರ್ಯಕ್ರಮವನ್ನು ಆಯೋಜಿಸಿರುವುದು ಹಾಸನ ಜಿಲ್ಲೆಯ ಇತಿಹಾಸದಲ್ಲಿ ಐತಿಹಾಸಿಕ ಕಾರ್ಯಕ್ರಮ ಎಂದು ಸಂಸದ ಶ್ರೇಯಸ್ ಎಂ.ಪಟೇಲ್ ತಿಳಿಸಿದರು.

ಹಾಸನಾಂಬ ಹಾಗೂ ಸಿದ್ದೇಶ್ವರ ಸ್ವಾಮಿ ಜಾತ್ರಾ ಮಹೋತ್ಸವದ ಅಂಗವಾಗಿ ಜಿಲ್ಲಾಡಳಿತ ಹಾಗೂ ಕನ್ನಡ-ಸಂಸ್ಕೃತಿ ಇಲಾಖೆ ವತಿಯಿಂದ ನಗರದ ಹೇಮಾವತಿ ಪ್ರತಿಮೆ ಮುಂಭಾಗ ಗುರುವಾರ ಸಂಜೆ ಆಯೋಜಿಸಿದ್ದ ಹಾಸನಾಂಬ ನೃತ್ಯ ವೈಭವ ರಾಜ್ಯ ಮಟ್ಟದ ನೃತ್ಯಸ್ಪರ್ಧೆ ಕಾರ್ಯಕ್ರಮವನ್ನು ಉದ್ಘಾಟಿಸಿ ಮಾತನಾಡಿದರು.

ಈ ವರ್ಷದ ಜಾತ್ರಾ ಮಹೋತ್ಸವ ಬಹಳ ಅಚ್ಚುಕಟ್ಟಾಗಿ ನಡೆಯಲಿದೆ ಎನ್ನುವ ವಿಶ್ವಾಸ ಮೂಡಿದೆ. ಸಾರ್ವಜನಿಕ ಭಕ್ತಾದಿಗಳ ಸಹಕಾರವನ್ನೂ ಈ ನಿಟ್ಟಿನಲ್ಲಿ ನಾವು ನಿರೀಕ್ಷಿಸುತ್ತೇವೆ ಎಂದು ಹೇಳಿದರು.

ಜಿಲ್ಲಾಧಿಕಾರಿ ಸಿ.ಸತ್ಯಭಾಮಾ ಮಾತನಾಡಿ, ಕಳೆದ ವರ್ಷ ಆಳ್ವಾಸ್ ನುಡಿಸಿರಿ ಕಾರ್ಯಕ್ರಮ ಆಯೋಜಿಸಿದ್ದರೂ ಮಳೆ ಕಾರಣದಿಂದ ನಿರೀಕ್ಷಿತ ಯಶಸ್ಸು ಕಂಡಿರಲಿಲ್ಲ. ಈ ಬಾರಿ ಹಾಸನಾಂಬೆ ಹುಂಡಿಯ ಹಣದಿಂದ ಹಾಸನಾಂಬ ನೃತ್ಯ ವೈಭವ ಕಾರ್ಯಕ್ರಮ ಆಯೋಜಿಸಲಾಗಿದೆ ಎಂದರು

ನೃತ್ಯ ವೈಭವದಲ್ಲಿ ರಾಜ್ಯದ ವಿವಿಧ ಭಾಗಗಳಿಂದ ೨೦ ತಂಡಗಳು ಭಾಗವಹಿಸಿದ್ದು, ಪ್ರಥಮ ಸ್ಥಾನ ಪಡೆದವರಿಗೆ ೧ ಲಕ್ಷ ರು. ಹಾಗೂ ದ್ವಿತೀಯ ಬಹುಮಾನವಾಗಿ ೫೦ ಸಾವಿರ ರುಪಾಯಿ ನಗದು ಬಹುಮಾನ ನೀಡಲಾಗುತ್ತಿದೆ ಎಂದು ತಿಳಿಸಿದರು.

ಹಾಸನಾಂಬ ನೃತ್ಯ ವೈಭವ ಕಾರ್ಯಕ್ರಮದಲ್ಲಿ ಮೊದಲ ಸ್ಥಾನ ಮಡಿಕೇರಿಯ ನಾಟ್ಯಕಲಾ ಡ್ಯಾನ್ಸ್ ಸ್ಟುಡಿಯೋ ಹಾಗೂ ದ್ವೀತಿಯ ಸ್ಥಾನ ಬಾಗಲಕೋಟೆ ಮಹಲಿಂಗಪುರದ ವಿಕೆ ಸ್ಟೈಲ್ ಡ್ಯಾನ್ಸ್ ಅಕಾಡೆಮಿ ಪಡೆದುಕೊಂಡರು. ರಾಜ್ಯ ವಿವಿಧ ಭಾಗಗಳಿಂದ ನೃತ್ಯ ತಂಡಗಳು ಭಾಗವಹಿಸಿದ್ದವು. ತೀರ್ಪುಗಾರರಾಗಿ ಹಿರಿಯ ನೃತ್ಯ ನಿರ್ದೇಶಕ ಸಾಯಿ ಲಕ್ಷ್ಮಣ್, ಆರ್.ಕೆ.ರಾಜ್‌ಕಮಲ್, ಯತಿರಾಜ್, ಭರತನಾಟ್ಯ ಕಲಾವಿದೆ ವಿದೂಷಿ ವೀಣಾ ಕಾರ್ಯನಿರ್ವಹಿಸಿದರು.

ಶಾಸಕ ಎಚ್.ಪಿ.ಸ್ವರೂಪ್ ಕಾರ್ಯಕ್ರಮದ ಅಧ್ಯಕ್ಷತೆ ವಹಿಸಿದ್ದರು. ನಗರಸಭೆ ಅಧ್ಯಕ್ಷ ಎಂ.ಚಂದ್ರೇಗೌಡ, ಅಪರ ಜಿಲ್ಲಾಧಿಕಾರಿ ಕೆ.ಟಿ.ಶಾಂತಲಾ, ಜಿಲ್ಲಾ ಪೊಲೀಸ್ ವರಿಷ್ಠಾಧಿಕಾರಿ ಮೊಹಮ್ಮದ್ ಸುಜೀತಾ, ಜಿಲ್ಲಾ ಪಂಚಾಯಿತಿ ಸಿಇಒ ಡಾ.ಬಿ.ಆರ್.ಪೂರ್ಣಿಮಾ, ಉಪ ವಿಭಾಗಾಧಿಕಾರಿ ಮಾರುತಿ, ಕನ್ನಡ-ಸಂಸ್ಕೃತಿ ಇಲಾಖೆ ಸಹಾಯಕ ನಿರ್ದೇಶಕ ತಾರಾನಾಥ್, ಜಿಲ್ಲಾ ಸರ್ಕಾರಿ ನೌಕರರ ಸಂಘದ ಅಧ್ಯಕ್ಷ ಈ.ಕೃಷ್ಣೇಗೌಡ ಇದ್ದರು.