ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕಳೆದ ಒಂಬತ್ತು ವರ್ಷಗಳಿಂದ ಪಕ್ಷದ ಜಿಲ್ಲಾಧ್ಯಕ್ಷರಾಗಿ ಅಲ್ತಾಫಹುಸೇನ ಹಳ್ಳೂರ ಹಾಗೂ 8 ವರ್ಷಗಳಿಂದ ಅನಿಲಕುಮಾರ ಪಾಟೀಲ ಅವರು ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು.
ಹುಬ್ಬಳ್ಳಿ: ಹು-ಧಾ ಮಹಾನಗರ ಜಿಲ್ಲಾ ಕಾಂಗ್ರೆಸ್ ಸಮಿತಿಯ ನೂತನ ಜಿಲ್ಲಾಧ್ಯಕ್ಷರಾಗಿ ಸದಾನಂದ ಡಂಗನವರ ಹಾಗೂ ಧಾರವಾಡ ಗ್ರಾಮೀಣ ಜಿಲ್ಲಾ ಕಾಂಗ್ರೆಸ್ ಸಮಿತಿಯ ಅಧ್ಯಕ್ಷರಾಗಿ ಚಂದ್ರಶೇಖರ ಜುಟ್ಟಲ್ ಭಾನುವಾರ ಅಧಿಕಾರ ಸ್ವೀಕರಿಸಿದರು.
ನಗರದ ಲ್ಯಾಮಿಂಗ್ಟನ್ ರಸ್ತೆಯಲ್ಲಿರುವ ನೂತನ ಜಿಲ್ಲಾ ಕಾಂಗ್ರೆಸ್ ಭವನದಲ್ಲಿ ನಡೆದ ಸಮಾರಂಭದಲ್ಲಿ ಮಹಾನಗರ ಜಿಲ್ಲಾ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಅಲ್ತಾಫಹುಸೇನ ಹಳ್ಳೂರ ಅವರಿಂದ ಡಂಗನವರ ಹಾಗೂ ಗ್ರಾಮೀಣ ಜಿಲ್ಲಾ ಕಾಂಗ್ರೆಸ್‌ನ ನಿಕಟಪೂರ್ವ ಅಧ್ಯಕ್ಷ ಅನಿಲಕುಮಾರ ಪಾಟೀಲ ಅವರಿಂದ ಜುಟ್ಟಲ್ ಅಧಿಕಾರ ವಹಿಸಿಕೊಂಡರು.ಅತಿಥಿಗಳಾಗಿ ಆಗಮಿಸಿದ್ದ ಶಾಸಕ ಪ್ರಸಾದ ಅಬ್ಬಯ್ಯ ಮಾತನಾಡಿ, ಕಳೆದ ಒಂಬತ್ತು ವರ್ಷಗಳಿಂದ ಪಕ್ಷದ ಜಿಲ್ಲಾಧ್ಯಕ್ಷರಾಗಿ ಅಲ್ತಾಫಹುಸೇನ ಹಳ್ಳೂರ ಹಾಗೂ 8 ವರ್ಷಗಳಿಂದ ಅನಿಲಕುಮಾರ ಪಾಟೀಲ ಅವರು ಸಲ್ಲಿಸಿದ ಸೇವೆಯನ್ನು ಶ್ಲಾಘಿಸಿದರು. ನೂತನ ಅಧ್ಯಕ್ಷರು ಪಕ್ಷವನ್ನು ಮತ್ತಷ್ಟು ಸಂಘಟಿಸಿ, ಬೂತ್ ಮಟ್ಟದಿಂದ ಕಾಂಗ್ರೆಸ್ ಸಂಘಟನೆಯನ್ನು ಬಲಪಡಿಸಬೇಕು ಎಂದರು.
ಪಕ್ಷದ ಸಂಘಟನೆಗೆ ಶಿಸ್ತು ಹಾಗೂ ಸಮಯ ಪಾಲನೆ ಅತ್ಯಂತ ಮುಖ್ಯ. ಪ್ರತಿಯೊಬ್ಬ ಕಾರ್ಯಕರ್ತರೂ ಬೂತ್ ಮಟ್ಟದಲ್ಲಿ ಸಕ್ರಿಯವಾಗಿ ತೊಡಗಿಸಿಕೊಂಡು ಪಕ್ಷದ ಕಾರ್ಯಕ್ರಮಗಳನ್ನು ಜನರಿಗೆ ತಲುಪಿಸಬೇಕು ಎಂದು ಸಲಹೆ ನೀಡಿದರು.ಅಧಿಕಾರ ಸ್ವೀಕರಿಸಿದ ಡಂಗನವರ ಹಾಗೂ ಜುಟ್ಟಲ್ ಅವರು ಪಕ್ಷದ ಸಂಘಟನೆಯನ್ನು ತಳಮಟ್ಟದಿಂದ ಬಲಪಡಿಸುವುದಾಗಿ ತಿಳಿಸಿದರು.
ಶಾಸಕ ಎನ್.ಎಚ್. ಕೋನರಡ್ಡಿ, ವಿಪ ಸದಸ್ಯ ಎಫ್.ಎಚ್. ಜಕ್ಕಪ್ಪನವರ, ಮಾಜಿ ಸಚಿವ ಎ.ಎಂ. ಹಿಂಡಸಗೇರಿ, ಶಿವಲೀಲಾ ಕುಲಕರ್ಣಿ ಸೇರಿದಂತೆ ಹಲವು ಮುಖಂಡರು, ಕೆಪಿಸಿಸಿ ಪದಾಧಿಕಾರಿಗಳು, ಮುಂಚೂಣಿ ಘಟಕಗಳ ಅಧ್ಯಕ್ಷರು, ಪಾಲಿಕೆ ಸದಸ್ಯರು ಹಾಗೂ ಕಾರ್ಯಕರ್ತರು ಉಪಸ್ಥಿತರಿದ್ದರು.ಮಕ್ಕಳಿಗೆ ಸಂಸ್ಕಾರ ಕೊಡಿ
ಹುಬ್ಬಳ್ಳಿ: ನಾವು ನಮ್ಮ ಮಕ್ಕಳಿಗೆ ಅಂಕ ಗಳಿಸುವುದನ್ನೇ ಹೇಳುತ್ತಿದ್ದೇವೆ. ಆದರೆ, ಒಳ್ಳೆಯ ನಡೆ- ನುಡಿ ಹಾಗೂ ಸಂಸ್ಕಾರ ನೀಡುವುದನ್ನು ಮರೆತಿದ್ದೇವೆ. ಮಕ್ಕಳಿಗೆ ಉತ್ತಮ ಸಂಸ್ಕಾರ ನೀಡುವ ಕಾರ್ಯ ಮಾಡಬೇಕೆಂದು ಹಿರಿಯ ರಂಗನಟಿ ಹಾಗೂ ಜೈಂಟ್ಸ್ ಗ್ರೂಪ್ ಆಫ್ ಸಹೇಲಿಯ ಹುಬ್ಬಳ್ಳಿ ಅಧ್ಯಕ್ಷೆ ವೀಣಾ ಮೋಡಕ ಕರೆ ನೀಡಿದರು.ಅವರು ಇಲ್ಲಿನ ಎಪಿಎಂಸಿ ಆವರಣದಲ್ಲಿರುವ ಜನಪದರು ಕರ್ನಾಟಕ ಜಾನಪದ ಜಗತ್ತು ಟ್ರಸ್ಟ್‌ನ ಗಂಗಮ್ಮ ಗಿರಿಯಪ್ಪಗೌಡ ಬಾಳನಗೌಡರ ಮೆಟ್ರಿಕ್ ಪೂರ್ವ ಬಾಲಕರ ವಸತಿ ನಿಲಯದ ಮಕ್ಕಳಿಗೆ ಭೈರಿದೇವರಕೊಪ್ಪದ ಜನಪದ ಜಗಲಿಯಲ್ಲಿ ನಡೆದ ಜೈಂಟ್ಸ್ ಗ್ರೂಪ್‌ನ ಸಪ್ತಾಹದಲ್ಲಿ ಸಮವಸ್ತ್ರ ಹಾಗೂ ಆಹಾರ ಕಿಟ್‌ಗಳನ್ನು ವಿತರಿಸಿ ಮಾತನಾಡಿದರು.ನಾವು ಮಕ್ಕಳಿಗೆ ಆಸ್ತಿ ಮಾಡುವುದಕ್ಕಿಂತ, ಮಕ್ಕಳನ್ನೇ ಆಸ್ತಿಯನ್ನಾಗಿ ಮಾಡುವಂತೆ ಕರೆ ನೀಡಿದರು.ಅತಿಥಿಗಳಾಗಿ ಆಗಮಿಸಿದ್ದ ಗೊಟಗೋಡಿ ಜಾನಪದ ವಿಶ್ವವಿದ್ಯಾಲಯದ ಅತಿಥಿ ಪ್ರಾಧ್ಯಾಪಕ ಡಾ. ಹಜರೇಸಾಬ್ ನದಾಫ್ ಅವರು ಮಕ್ಕಳಿಗೆ ನೈತಿಕ ಮೌಲ್ಯಗಳ ಕುರಿತು ಪಾಠ ಮಾಡಿದರು.ಡಾ. ರಾಮು ಮೂಲಗಿ ಅಧ್ಯಕ್ಷತೆ ವಹಿಸಿದ್ದರು. ಅತಿಥಿಗಳಾಗಿ ಭಾರತಿ ವಾಲಿ, ಶಾಂತಾ ಅಂಗಡಿ ಸೇರಿದಂತೆ ಹಲವರು ಪಾಲ್ಗೊಂಡಿದ್ದರು. ಹಾಸ್ಟೆಲ್ ಸಹಾಯಕ ಅಯ್ಯಪ್ಪ ದೇವರಮನಿ ಸ್ವಾಗತಿಸಿ, ವಂದಿಸಿದರು.