ದರ್ಶನ್ ಗೆ ಬಾತುಕೋಳಿ ಸಾಕಿದ ಪ್ರಕರಣದಲ್ಲಿ ಮತ್ತೊಂದು ಸಂಕಟ

| Published : Jun 19 2024, 01:01 AM IST

ದರ್ಶನ್ ಗೆ ಬಾತುಕೋಳಿ ಸಾಕಿದ ಪ್ರಕರಣದಲ್ಲಿ ಮತ್ತೊಂದು ಸಂಕಟ
Share this Article
  • FB
  • TW
  • Linkdin
  • Email

ಸಾರಾಂಶ

ದರ್ಶನ್ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಎಫ್.ಐ.ಆರ್ ದಾಖಲಾಗಿ ಐದು ನೋಟಿಸ್ ನೀಡಿದರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿಸಿಯೂ ಇರಲಿಲ್ಲ.

ಅರಣ್ಯ ಇಲಾಖೆಯಿಂದ ದೋಷಾರೋಪ ಪಟ್ಟಿ ಸಲ್ಲಿಕೆ ಸಾಧ್ಯತೆ

ಮೈಸೂರು: ಕಾನೂನುಬಾಹಿರವಾಗಿ ವಿಶಿಷ್ಟ ಪ್ರಬೇಧದ ಪಟ್ಟೆ-ತಲೆ ಹೆಬ್ಬಾತು (ಬಾರ್ಹೆಡೆಡ್ ಗೂಸ್) ಸಾಕಿದ ಪ್ರಕರಣದಲ್ಲಿ ದರ್ಶನ್ ಗೆ ಮತ್ತೊಂದು ಸಂಕಷ್ಟ ಎದುರಾಗುವ ಸಾಧ್ಯತೆ ಇದೆ. ಮೈಸೂರು ಹೊರವಲಯದ ತನ್ನ ತೋಟದಲ್ಲಿ ಕಾನೂನು ಬಾಹಿರವಾಗಿ ವಿಶಿಷ್ಟ ಪ್ರಬೇಧದ ಬಾತುಕೋಳಿ ಸಾಕಿದ ಪ್ರಕರಣ ಬೆಳಕಿಗೆ ಬಂದಿದ್ದು, ನಟ ದರ್ಶನ್ ಹಾಗೂ ಪತ್ನಿ ವಿಜಯಲಕ್ಷ್ಮೀಗೂ ಸಂಕಷ್ಟ ಎದುರಾಗಿದೆ. ಪ್ರಕರಣ ಸಂಬಂಧ 2 ದಿನಗಳಲ್ಲಿ ದೋಷಾರೋಪ ಪಟ್ಟಿ ಸಲ್ಲಿಸಲು ಅರಣ್ಯ ಇಲಾಖೆ ನಿರ್ಧರಿಸಿರುವುದಾಗಿ ತಿಳಿದು ಬಂದಿದೆ.

ದರ್ಶನ್ ಪತ್ನಿ ವಿಜಯಲಕ್ಷ್ಮಿ A1, ಪ್ರಾಪರ್ಟಿ ಮ್ಯಾನೇಜರ್ ನಾಗರಾಜ್ A2 ಹಾಗೂ ನಟ ದರ್ಶನ್ A3 ಆರೋಪಿಯಾಗಿದ್ದಾರೆ. ಪ್ರಕರಣ ಸಂಬಂಧ ಎಫ್.ಐ.ಆರ್ ದಾಖಲಾಗಿ ಐದು ನೋಟಿಸ್ ನೀಡಿದರೂ ನಟ ದರ್ಶನ್ ವಿಚಾರಣೆಗೆ ಹಾಜರಾಗಿರಲಿಲ್ಲ. ಈ ಮಧ್ಯೆ ಪ್ರಕರಣದಲ್ಲಿ ದರ್ಶನ್ ಬಂಧಿಸಿಯೂ ಇರಲಿಲ್ಲ.

ನಿಯಮಗಳ ಪ್ರಕಾರ ಬಾರ್ ಹೆಡೆಡ್ ಗೂಸ್ ಸಾಕುವುದು ಕಾನೂನು ಬಾಹಿರ. ಇನ್ನು ದರ್ಶನ್ ಸೆಲೆಬ್ರಿಟಿ ಆದ್ದರಿಂದ ವಿಚಾರಣೆಗೆ ಅವಕಾಶ ನೀಡಲಾಗಿತ್ತು. ತಲೆಮರೆಸಿಕೊಳ್ಳದ ಕಾರಣ ಬಲವಂತವಾಗಿ ಅರಣ್ಯ ಇಲಾಖೆ ದರ್ಶನ್ ಅವರನ್ನು ಬಂಧಿಸಿಲ್ಲ. ಈಗ ಪ್ರಕರಣ ಚುರುಕುಗೊಳಿಸಿರುವ ಅರಣ್ಯ ಇಲಾಖೆ ಚಾರ್ಜ್ ಶೀಟ್ ಸಲ್ಲಿಕೆಗೆ ತೀರ್ಮಾನಿಸಿದೆ ಎಂದು ಗೊತ್ತಾಗಿದೆ.