ಸಾರಾಂಶ
ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿಗೊಳಿಸಲು ಮೀನಮೇಷ ಎಣಿಸುತ್ತಿದ್ದಾರೆ. ಇದರಿಂದ ಸಿಎಂ ಒಳ ಮೀಸಲಾತಿ ಪರವಾಗಿ ಇಲ್ಲ ಎಂಬುದು ಸ್ಪಷ್ಟ.
ಕನ್ನಡಪ್ರಭ ವಾರ್ತೆ ಚಿಕ್ಕಬಳ್ಳಾಪುರ
ಒಳ ಮೀಸಲಾತಿ ವರ್ಗೀಕರಣ ಮಾಡುವ ಆದೇಶ ನೀಡುವುದು ಸೇರಿದಂತೆ ವಿವಿಧ ಬೇಡಿಕೆಗಳ ಈಡೇರಿಕೆಗೆ ಆಗ್ರಹಿಸಿ ಸೆ. 12ರಂದು ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸಾಂಕೇತಿಕ ಧರಣಿ ಕಾರ್ಯಕ್ರಮ ಹಮ್ಮಿಕೊಂಡಿದೆ ಎಂದು ಜಿಲ್ಲಾ ಅನುಷ್ಠಾನ ಸಮಿತಿ ನಾಮ ನಿರ್ದೇಶಕ ಹಾಗೂ ದಲಿತ ಸಂಘರ್ಷ ಸಮಿತಿ ಜಿಲ್ಲಾ ಸಂಚಾಲಕ ವಿ.ನರಸಿಂಹಪ್ಪ ತಿಳಿಸಿದರು.ನಗರದಲ್ಲಿ ಸೋಮವಾರ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿ, ಪರಿಶಿಷ್ಟ ಜಾತಿ ಪರಿಶಿಷ್ಟ ಪಂಗಡಗಳಲ್ಲಿ ಒಳ ಮೀಸಲಾತಿಗೆ ಸುಪ್ರೀಂ ಕೋರ್ಟ್ ಒಪ್ಪಿಗೆ ನೀಡಿದ್ದು ರಾಜ್ಯ ಸರ್ಕಾರ ತುರ್ತಾಗಿ ಒಳ ಮೀಸಲಾತಿ ಜಾರಿಗೊಳಿಸಬೇಕು. ಈ ವಿಚಾರದಲ್ಲಿ ಮುಖ್ಯಮಂತ್ರಿ ಸಿದ್ದರಾಮಯ್ಯ ಒಳ ಮೀಸಲಾತಿ ಜಾರಿ ಮಾಡಿಕೊಡುವಲ್ಲಿ ಮೀನಮೇಷ ಎಣಿಸುತ್ತಿದ್ದಾರೆ. ಇದರಿಂದ ಮುಖ್ಯಮಂತ್ರಿಗಳು ಒಳ ಮೀಸಲಾತಿ ಪರವಾಗಿ ಇಲ್ಲ ಎಂಬುದು ಸ್ಪಷ್ಟವಾಗಿ ತಿಳಿಯುತ್ತದೆ ಎಂದು ಆರೋಪಿಸಿದರು.ಜಾರಿಗೆ ಸರ್ಕಾರ ಮೀನಮೇಷ
ರಾಜ್ಯ ಸರ್ಕಾರಗಳಿಗೆ ಪರಿಶಿಷ್ಟ ಜಾತಿ ಒಳ ಮೀಸಲಾತಿ ವರ್ಗೀಕರಣ ಮಾಡುವ ಅಧಿಕಾರ ಇದೆ ಎಂದು ಸುಪ್ರೀಂ ಕೋರ್ಟ್ ಆದೇಶ ಮಾಡಿದೆ. ಇದನ್ನು ರಾಜ್ಯ ಸರ್ಕಾರ ಸಮಯಕ್ಕೆ ಸರಿಯಾಗಿ ಅನುಷ್ಠಾನ ಮಾಡುತ್ತಿಲ್ಲ. ಸರ್ಕಾರ ತಕ್ಷಣವೇ ಪರಿಶಿಷ್ಟ ಜಾತಿಯೊಳಗಿನ ಉಪ ಜಾತಿಗಳಿಗೆ ಒಳಮೀಸಲಾತಿ ಕಲ್ಪಿಸಲು, ಆಗ್ರಹಿಸಿ ರಾಜ್ಯ ಸರ್ಕಾರದ ವಿರುದ್ಧ ನಮ್ಮ ಬೇಡಿಕೆಗಳು ಈಡೇರಿಸುವಂತೆ ಆಗ್ರಹಿಸಿ ಜಿಲ್ಲಾಧಿಕಾರಿಗಳ ಕಚೇರಿ ಮುಂದೆ ಸೆ. 12ರಂದು ಸಾಂಕೇತಿಕ ಧರಣಿ ನಡೆಸಲಾಗುವುದು ಎಂದರು.ಸುದ್ದಿಗೋಷ್ಠಿಯಲ್ಲಿ ದಸಂಸ ಮುಖಂಡರಾದ ಜಿ.ಗಂಗಣ್ಣ, ಮಂಚೇನಹಳ್ಳಿಯ ವೆಂಕಟಸ್ವಾಮಿ, ಎಂ.ಜಿ.ರಮೇಶ,ಕೃಷ್ಣಪ್ಪ, ವೆಂಕಟೇಶ್, ಗೌರಿಬಿದನೂರ್ ಕೃಷ್ಣ, ಮಂಚೇನಹಳ್ಳಿ ಮಹಿಳಾ ಘಟಕದ ಮೋಕ್ಷ ಅಲೆಕ, ಚಿಂತಾಮಣಿ ನರೇಶ್ ನಾರಾಯಣಪ್ಪ,ನಾಗರಾಜು ಮತ್ತಿತರರು ಇದ್ದರು.