ಕಾಂಗ್ರೆಸ್ ಪಕ್ಷಕ್ಕೆ ದಸಂಸ ಸಂಪೂರ್ಣ ಬೆಂಬಲ: ನಾಟೇಕರ್

| Published : May 01 2024, 01:18 AM IST

ಕಾಂಗ್ರೆಸ್ ಪಕ್ಷಕ್ಕೆ ದಸಂಸ ಸಂಪೂರ್ಣ ಬೆಂಬಲ: ನಾಟೇಕರ್
Share this Article
  • FB
  • TW
  • Linkdin
  • Email

ಸಾರಾಂಶ

ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯ: ನಾಟೀಕಾರ್‌

ಕನ್ನಡಪ್ರಭ ವಾರ್ತೆ ಯಾದಗಿರಿ

ಲೋಕಸಭಾ ಸಾರ್ವತ್ರಿಕ ಚುನಾವಣೆ ಹಾಗೂ ಸುರಪುರ ವಿಧಾನಸಭೆ ಮತಕ್ಷೇತ್ರದ ಉಪ ಚುನಾವಣೆಯಲ್ಲಿ ಕಾಂಗ್ರೆಸ್ ಪಕ್ಷ ಬೆಂಬಲಿಸಲು ಕರ್ನಾಟಕ ದಲಿತ ಸಂಘರ್ಷ ಸಮಿತಿ (ಭೀಮವಾದ) ನಿರ್ಧರಿಸಿದೆ ಎಂದು ಡಿಎಸ್‌ಎಸ್‌ ಜಿಲ್ಲಾಧ್ಯಕ್ಷ ಶರಣು ಎಸ್. ನಾಟೇಕರ್ ತಿಳಿಸಿದರು.

ನಗರದಲ್ಲಿ ನಡೆದ ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅವರು, ದಲಿತ ಸಂಘರ್ಷ ಸಮಿತಿಯು ರಾಜ್ಯ ಸಮಿತಿ ಆದೇಶದ ಮೇರೆಗೆ ಜಿಲ್ಲೆಯಲ್ಲಿನ ಲೋಕಸಭಾ ಚುನಾವಣೆ ಹಾಗೂ ಸುರಪುರ ಕ್ಷೇತ್ರದ ಉಪಚುನಾವಣೆಯಲ್ಲಿ ಕಾಂಗ್ರೆಸ್ ಅಭ್ಯರ್ಥಿಗಳನ್ನು ಬೆಂಬಲಿಸಲು ನಿರ್ಣಯಿಸಲಾಗಿದೆ ಎಂದು ತಿಳಿಸಿದರು.

ರಾಯಚೂರು ಲೋಕಸಭೆಯ ಅಭ್ಯರ್ಥಿ ಡಾ. ಜಿ. ಕುಮಾರ ನಾಯಕ ಮತ್ತು ಕಲಬುರಗಿ ಅಭ್ಯರ್ಥಿ ಡಾ. ರಾಧಾಕೃಷ್ಣ ದೊಡ್ಡಮನಿ ಹಾಗೂ ಸುರಪುರ ವಿಧಾನಸಭೆ ಉಪಚುನಾವಣೆಯ ಅಧಿಕೃತ ಅಭ್ಯರ್ಥಿ ರಾಜಾ ವೇಣುಗೋಪಾಲ ನಾಯಕ ಅವರಿಗೆ ಬೆಂಬಲಿಸಲು ಸಮಿತಿಯ ಜಿಲ್ಲಾ, ತಾಲೂಕು, ಹೋಬಳಿ ಹಾಗೂ ಗ್ರಾಮ, ಮಹಿಳಾ, ನಗರ ಘಟಕಗಳ ಪದಾಧಿಕಾರಿಗಳಿಗೆ ಸೂಚಿಸಲಾಗಿದೆ ಎಂದು ತಿಳಿಸಿದರು.

ಪ್ರಸಕ್ತ ಚುನಾವಣೆಯ ಸಂದರ್ಭದಲ್ಲಿ ಸಂಸದ ಪ್ರಜ್ವಲ್ ರೇವಣ್ಣ ಅವರ ಅಮಾಯಕ ಹೆಣ್ಣುಮಕ್ಕಳ ಮೇಲೆ ನಡೆಸಿದ ಲೈಂಗಿಕ ದೌರ್ಜನ್ಯದ ಪೆನ್ ಡ್ರೈವ್ ಪ್ರಕರಣ ಬಯಲಿಗೆ ಬಂದಿದ್ದು, ಕೂಡಲೇ ಪ್ರಜ್ವಲ್ ಬಂಧಿಸಿ, ಕಾನೂನು ಪ್ರಕಾರ ಶಿಕ್ಷೆಗೆ ಒಳಪಡಿಸಬೇಕೆಂದು ದಸಂಸ ಭೀಮವಾದ ಒತ್ತಾಯಿಸುತ್ತದೆ ಎಂದರು.

ದಸಂಸ ಭೀಮವಾದ ಜಿಲ್ಲಾ ಸಮಿತಿ ವತಿಯಿಂದ ಹಾಲಿ ಚಾಮರಾಜನಗರ ಸಂಸದ ವಿ. ಶ್ರೀನಿವಾಸಪ್ರಸಾದ ಅವರ ನಿಧನಕ್ಕೆ ಮೌನಾಚರಣೆ ಮಾಡಿ ಶ್ರದ್ಧಾಂಜಲಿ ಸಲ್ಲಿಸಲಾಯಿತು.

ಈ ವೇಳೆ ರಾಜ್ಯ ಸಂಘಟನಾ ಸಂಚಾಲಕ ಭೀಮರಾಯ ಸಿಂಧಿಗೇರಿ, ವಿಭಾಗೀಯ ಸಂಚಾಲಕ ಶಿವಶಂಕರ, ಕಲಬುರಗಿ ಜಿಲ್ಲಾ ಸಂಚಾಲಕ ಕಾಶಿನಾಥ ಶೆಳ್ಳಗಿ, ಮಾರುತಿ ಕಾಳಗಿ, ಯಾದಗಿರಿ ಜಿಲ್ಲಾ ಸಂಘಟನಾ ಸಂಚಾಲಕ ಮಹಾದೇವಪ್ಪ ಗುರುಸುಣಿಗಿ, ಮಲ್ಲಪ್ಪ ಲಂಡನ್‌ಕರ್, ಮಲ್ಲಿಕಾರ್ಜುನ ತಳವಾರಗೇರಿ, ಸಿದ್ರಾಮ ನಾಯ್ಕಲ್, ತಾಲೂಕು ಸಂಚಾಲಕ ಶರಣಪ್ಪ ಯರಗೋಳ, ಶರಣು ಹಾಲಳ್ಳಿ, ಸಿಕಂದರ ಗುರುಸುಣಿಗಿ ಇತರರಿದ್ದರು.