ಪರಿಶಿಷ್ಟರಿಗೆ ಒಳ ಮೀಸಲು ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ

| Published : Aug 13 2024, 12:57 AM IST

ಪರಿಶಿಷ್ಟರಿಗೆ ಒಳ ಮೀಸಲು ಜಾರಿಗೆ ಆಗ್ರಹಿಸಿ ದಸಂಸ ಪ್ರತಿಭಟನೆ
Share this Article
  • FB
  • TW
  • Linkdin
  • Email

ಸಾರಾಂಶ

ಪರಿಶಿಷ್ಟರಿಗೆ ಒಳ ಮೀಸಲಾತಿ ಜಾರಿಗಾಗಿ ಸುದೀರ್ಘ ಹೋರಾಟ ನಡೆದರೂ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳು ಒಳ ಮೀಸಲು ಜಾರಿಗೆ ಇಚ್ಛಾಸಕ್ತಿ ತೋರಲಿಲ್ಲ. ಇದೀಗ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೆ ಸಮ್ಮತಿಸಿರುವುದು ಸ್ವಾಗತಾರ್ಹ.

ಕನ್ನಡಪ್ರಭ ವಾರ್ತೆ ಮಂಡ್ಯ

ಸರ್ವೋಚ್ಚ ನ್ಯಾಯಾಲಯದ ಆದೇಶದಂತೆ ಪರಿಶಿಷ್ಟರಿಗೆ ಒಳ ಮೀಸಲಾತಿ ನೀತಿ ಜಾರಿಗೆ ರಾಜ್ಯ ಸರ್ಕಾರ ಸುಗ್ರೀವಾಜ್ಞೆ ಹೊರಡಿಸುವಂತೆ ಆಗ್ರಹಿಸಿ ದಲಿತ ಸಂಘರ್ಷ ಸಮಿತಿ ಮಂಡ್ಯದಲ್ಲಿ ಪ್ರತಿಭಟನೆ ನಡೆಸಿತು.

ನಗರದ ಜಯಚಾಮರಾಜೇಂದ್ರ ಒಡೆಯರ್ ವೃತ್ತದಿಂದ ಸಮಿತಿಯ ಕಾರ್ಯಕರ್ತರು ಮೆರವಣಿಗೆ ಹೊರಟು ಜಿಲ್ಲಾಧಿಕಾರಿ ಕಚೇರಿಗೆ ತೆರಳಿ ಜಿಲ್ಲಾಧಿಕಾರ ಮೂಲಕ ರಾಜ್ಯಪಾಲರಿಗೆ ಮನವಿ ಪತ್ರ ರವಾನಿಸಿದರು.

ಪರಿಶಿಷ್ಟರಿಗೆ ಒಳ ಮೀಸಲಾತಿ ಜಾರಿಗಾಗಿ ಸುದೀರ್ಘ ಹೋರಾಟ ನಡೆದರೂ ರಾಜ್ಯವನ್ನಾಳಿದ ಕಾಂಗ್ರೆಸ್, ಜೆಡಿಎಸ್ ಹಾಗೂ ಬಿಜೆಪಿ ಸರ್ಕಾರಗಳು ಒಳ ಮೀಸಲು ಜಾರಿಗೆ ಇಚ್ಛಾಸಕ್ತಿ ತೋರಲಿಲ್ಲ. ಇದೀಗ ಸರ್ವೋಚ್ಚ ನ್ಯಾಯಾಲಯ ಒಳ ಮೀಸಲಾತಿ ಜಾರಿಗೆ ಸಮ್ಮತಿಸಿರುವುದು ಸ್ವಾಗತಾರ್ಹ, ರಾಜ್ಯ ಸರ್ಕಾರ ಅನವಶ್ಯಕವಾಗಿ ಉಪಸಮಿತಿ ರಚನೆ ನಾಟಕವನ್ನಾಡದೆ ನ್ಯಾ.ಎ.ಜೆ ಸದಾಶಿವ ಆಯೋಗದ ವರದಿ ಹಾಗೂ ರಾಜ್ಯ ಶಾಶ್ವತ ಹಿಂದುಳಿದ ವರ್ಗಗಳ ಆಯೋಗದ ಆರ್ಥಿಕ ಮತ್ತು ಸಾಮಾಜಿಕ ಸಮೀಕ್ಷೆಯ ಎಚ್.ಕಾಂತರಾಜು ವರದಿ ಆದರಿಸಿ ಪರಿಶಿಷ್ಟರ ಮೀಸಲು ನೀತಿ ಜಾರಿಗೆ ಸುಗ್ರೀವಾಜ್ಞೆ ಹೊರಡಿಸಬೇಕು ಎಂದು ಒತ್ತಾಯಿಸಿದರು.

ಸರ್ವೋಚ್ಚ ನ್ಯಾಯಾಲಯ ತೀರ್ಪಿನಲ್ಲಿ ಪರಿಶಿಷ್ಟರ ಮೀಸಲಾತಿ ನೀತಿಯಲ್ಲಿ ಕ್ರಿಮಿಲೇಯರ್ ಪದ್ಧತಿ ಅಳವಡಿಸಲು ಸಂವಿಧಾನ ಪೀಠದ ಬಹುತೇಕ ನ್ಯಾಯಾಧೀಶರು ಸೂಚಿಸಿದ್ದು ರಾಜ್ಯ ಸರ್ಕಾರ ವೈಜ್ಞಾನಿಕ ಮಾನದಂಡ ಅನುಸರಿಸಿ ಕ್ರೀಮಿ ಲೇಯರ್ ಪದ್ಧತಿ ಅಳವಡಿಸಬೇಕು ಎಂದು ಒತ್ತಾಯಿಸಿದರು.

ಸಮಿತಿಯ ರಾಜ್ಯಾಧ್ಯಕ್ಷ ವೆಂಕಟಗಿರಿಯಯ್ಯ, ಜಿಲ್ಲಾಧ್ಯಕ್ಷ ಬಿ.ಆನಂದ್, ವೈ.ಸುರೇಶ್ ಕುಮಾರ್, ಕೆ.ಎಂ.ಅನಿಲ್ ಕುಮಾರ್, ಸುಮಿತ್ರ, ಸರಳ, ರಾಮಕೃಷ್ಣ ಸಂಪಳ್ಳಿ, ಸಿದ್ದಯ್ಯ ದೊಡ್ಡ ಭೂಹಳ್ಳಿ, ಮೇಡಮೂರ್ತಿ, ಮಹದೇವ ಕೊತ್ತತ್ತಿ, ಎನ್‌.ಸಿ.ರಾಜು ನಿಡಘಟ್ಟ ನೇತೃತ್ವ ವಹಿಸಿದ್ದರು.