ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮೈದಾನದಲ್ಲಿ ನಡೆಯಿತು.

ಬೆಳ್ತಂಗಡಿ: ತಾಲೂಕು ಮಟ್ಟದ ದಸರಾ ಕ್ರೀಡಾಕೂಟ ಮಡಂತ್ಯಾರ್ ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮೈದಾನದಲ್ಲಿ ನಡೆಯಿತು.

ಗ್ಯಾರಂಟಿ ಯೋಜನೆಗಳ ಅನುಷ್ಠಾನ ಸಮಿತಿ ಬೆಳ್ತಂಗಡಿ ತಾಲೂಕು ಅಧ್ಯಕ್ಷ ಪದ್ಮನಾಭ ಸಾಲ್ಯಾನ್ ಅಧ್ಯಕ್ಷತೆ ವಹಿಸಿದ್ದರು. ತಾಪಂ ಕಾರ್ಯನಿರ್ವಹಣಾಧಿಕಾರಿ ಭವಾನಿ ಶಂಕ‌ರ್ ಕ್ರೀಡಾಕೂಟ ಉದ್ಘಾಟಿಸಿದರು. ತಹಸೀಲ್ದಾರ್ ಎಸ್.ಎನ್. ನರಗುಂದ, ಸೇಕ್ರೆಡ್ ಹಾರ್ಟ್ ಶಿಕ್ಷಣ ಸಂಸ್ಥೆಗಳ ಸಂಚಾಲಕ ಡಾ. ಸ್ಪಾನಿ ಗೋವಿಯಸ್, ಪ್ರಿನ್ಸಿಪಾಲ್ ಪ್ರೊ. ಅಲೆಕ್ಸ್ ಐವನ್ ಸಿಕ್ವೆರಾ ಹಾಗೂ ತಾಲೂಕು ಯುವಜನ ಒಕ್ಕೂಟದ ಅಧ್ಯಕ್ಷ ವಿಜಯಗೌಡ, ಎಸ್ ಡಿಎಂ ಸ್ಪೋರ್ಟ್ಸ್ ಕ್ಲಬ್ ಉಜಿರೆಯ ಕ್ರೀಡಾ ಕಾರ್ಯದರ್ಶಿ ರಮೇಶ್ ಎಚ್., ತಾಲೂಕು ನೌಕರರ ಸಂಘದ ಅಧ್ಯಕ್ಷ ಜಯರಾಜ್ ಜೈನ್, ದಕ್ಷಿಣ ಕನ್ನಡ ಅಮೆಚೂರ್

ಕಬಡ್ಡಿ ಸಂಸ್ಥೆಯ ಪ್ರಧಾನ ಕಾರ್ಯದರ್ಶಿ ಫ್ರಾನ್ಸಿಸ್ ವಿ.ಬಿ., ಅಜಿತ್ ಕುಮಾರ್ ಕೊಕ್ರಾಡಿ, ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಶ್ರೀನಿವಾಸ್ ಡಿ.ಎಸ್., ಕ್ರೀಡಾಕೂಟದ ನೋಡಲ್ ಅಧಿಕಾರಿ ಡಾ. ಪ್ರಕಾಶ್ ಡಿಸೋಜಾ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆಯ ಸಾಂತಪ್ಪ ಮತ್ತಿತರರು ಉಪಸ್ಥಿತರಿದ್ದರು. ವಸಂತ್ ಶೆಟ್ಟಿ ನಿರೂಪಿಸಿದರು.ದಕ್ಷಿಣ ಕನ್ನಡ ಜಿಲ್ಲಾಡಳಿತ, ಜಿಲ್ಲಾಪಂಚಾಯಿತಿ, ಯುವ ಸಬಲೀಕರಣ ಮತ್ತು ಕ್ರೀಡಾ ಇಲಾಖೆ, ಶಾಲಾ ಶಿಕ್ಷಣ ಇಲಾಖೆ, ಬೆಳ್ತಂಗಡಿ ತಾಲೂಕು ಪಂಚಾಯಿತಿ, ಬೆಳ್ತಂಗಡಿ ನಗರ ಪಂಚಾಯಿತಿ, ಮಹಾತ್ಮ ಗಾಂಧಿ ಮಡಂತ್ಯಾರ್ ಗ್ರಾಮ ಪಂಚಾಯಿತಿ ತಾಲೂಕು ಯುವಜನ ಒಕ್ಕೂಟ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಸೇಕ್ರೆಡ್ ಹಾರ್ಟ್ ಪದವಿ ಕಾಲೇಜು ಮಡಂತ್ಯಾರು ಸಹಯೋಗದಲ್ಲಿ ಕಾರ್ಯಕ್ರಮ ಜರುಗಿತು.