ಸಾರಾಂಶ
ಸಮಾಜದಲ್ಲಿ ಮೌಢ್ಯ, ಕಂದಾಚಾರದ ವಿರುದ್ಧ ಕಾಂತ್ರಿಕಾರ ಹೆಜ್ಜೆಗಳನ್ನಿಟ್ಟ ಶರಣ ದೇವರ ದಾಸಿಮಯ್ಯನವರು ವೈಚಾರಿಕ ಚಿಂತನೆಗಳ ಮೂಲಕ ಜನರಿಗೆ ಅರಿವಿನ ದಾರಿ ತೋರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಹೇಳಿದರು.
ಕನ್ನಡಪ್ರಭ ವಾರ್ತೆ ಯಾದಗಿರಿ
ಸಮಾಜದಲ್ಲಿ ಮೌಢ್ಯ, ಕಂದಾಚಾರದ ವಿರುದ್ಧ ಕಾಂತ್ರಿಕಾರ ಹೆಜ್ಜೆಗಳನ್ನಿಟ್ಟ ಶರಣ ದೇವರ ದಾಸಿಮಯ್ಯನವರು ವೈಚಾರಿಕ ಚಿಂತನೆಗಳ ಮೂಲಕ ಜನರಿಗೆ ಅರಿವಿನ ದಾರಿ ತೋರಿದ್ದಾರೆ ಎಂದು ಜಿಲ್ಲಾಧಿಕಾರಿ ಡಾ. ಸುಶೀಲಾ ಅವರು ಹೇಳಿದರು.ಲೋಕಸಭಾ ಚುನಾವಣೆ ನಿಮಿತ್ತ ನೀತಿ ಸಂಹಿತೆ ಜಾರಿಯಲ್ಲಿರುವುದರಿಂದ ನಗರದ ಜಿಲ್ಲಾಧಿಕಾರಿಗಳ ಕಚೇರಿಯಲ್ಲಿ ಸರಳ ಹಾಗೂ ಸಾಂಕೇತಿಕವಾಗಿ ದೇವರ ದಾಸಿಮಯ್ಯನವರ ಜಯಂತಿ ಆಚರಣೆಯಲ್ಲಿ ಅವರು ಮಾತನಾಡಿದರು.
ತಮ್ಮ ವಚನಗಳ ಮೂಲಕ ಸಮಾಜದ ಅಂಕು-ಡೊಂಡುಗಳನ್ನು ತಿದ್ದುವ ಕೆಲಸ ಮಾಡಿದ್ದಾರೆ. ಮನುಷ್ಯ ತನ್ನಲ್ಲಿನ ಅಹಂಕಾರವನ್ನು ತೊರೆದು ಭಕ್ತಿ ಮಾರ್ಗದಲ್ಲಿ ನಡೆಯಬೇಕು ಎಂದು ಸಾರಿದ್ದಾರೆ ಎಂದರು.ಅಪರ ಜಿಲ್ಲಾಧಿಕಾರಿ ಶರಣಬಸಪ್ಪ ಕೋಟೆಪ್ಪಗೊಳ, ಜಿಲ್ಲಾ ಪಂಚಾಯ್ತಿ ಯೋಜನಾ ನಿರ್ದೇಶಕ ಬಿ.ಎಸ್. ರಾಠೋಡ್, ಸಹಾಯಕ ಆಯುಕ್ತ ಪ್ರಕಾಶ ಕುದರಿ, ಕನ್ನಡ ಮತ್ತು ಸಂಸ್ಕೃತಿ ಇಲಾಖೆಯ ಸಹಾಯಕ ನಿರ್ದೇಶಕಿ ಉತ್ತರಾದೇವಿ, ಪಶುಪಾಲನ ಇಲಾಖೆ ಉಪನಿರ್ದೇಶಕ ಡಾ. ರಾಜ ದೇಶಮುಖ, ಸಹಕಾರ ಸಂಘಗಳ ಉಪನಿರ್ದೇಶಕ ಪವನಕುಮಾರ, ತಹಸೀಲ್ದಾರರಾದ ನಾಗಮ್ಮ ಕಟ್ಟಿಮನಿ, ಯಲ್ಲಪ್ಪ, ಸಮಾಜದ ಮುಖಂಡರಾದ ಬಸವರಾಜ ಹುನಗುಂದ, ವಿಜಯ ಮಾರ್ಪಲ್ಲಿ, ಸಹಾಯಕ ಸಾಂಖ್ಯಿಕ ಇಲಾಖೆ ಅಧಿಕಾರಿ ನಾಗರಾಜ ನಾಗೂರ, ಲೆಕ್ಕ ಪರಿಶೋಧನಾಧಿಕಾರಿ ಸುರೇಶ ಪಾಣಿಬಾತೆ ಸೇರಿದಂತೆ ಇತರರಿದ್ದರು.