ಸಾರಾಂಶ
ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಜರುಗಿದೆ.
ರಾವಂದೂರು : ಎಸ್ಎಸ್ಎಲ್ಸಿ ವಿದ್ಯಾರ್ಥಿನಿ ಹೃದಯಘಾತದಿಂದ ಸಾವನ್ನಪ್ಪಿದ ಘಟನೆ ಮೈಸೂರು ಜಿಲ್ಲೆ ಪಿರಿಯಾಪಟ್ಟಣ ತಾಲೂಕಿನಲ್ಲಿ ಜರುಗಿದೆ.
ಪಿರಿಯಾಪಟ್ಟಣ ತಾಲೂಕು ಕೆಲ್ಲೂರು ಗ್ರಾಮದ ನಾಗರಾಜ್- ವಸಂತ ದಂಪತಿ ಪುತ್ರಿ ದೀಪಿಕಾ (15) ಮೃತಪಟ್ಟವರು. ದೀಪಿಕಾ ರಾವಂದೂರು ಕರ್ನಾಟಕ ಪಬ್ಲಿಕ್ ಶಾಲೆಯಲ್ಲಿ ಎಸ್ಎಸ್ಎಲ್ಸಿ ವ್ಯಾಸಂಗ ಮಾಡುತ್ತಿದ್ದರು. ತಂದೆ ಕುಶಾಲನಗರದ ಗ್ರಾಮದಲ್ಲಿ ಕೂಲಿ ಕೆಲಸ ಮಾಡಿ ಜೀವನ ನಡೆಸುತ್ತಿದ್ದರು.
ತಂದೆಯನ್ನು ನೋಡಲು ತಾಯಿ ಮತ್ತು ಪುತ್ರಿ ಶನಿವಾರ ಇಬ್ಬರು ಕುಶಾಲನಗರಕ್ಕೆ ಹೋಗಿದ್ದರು. ಭಾನುವಾರ ಬೆಳಗ್ಗೆ ದೀಪಿಕಾ ಸುಸ್ತಾಗಿದ್ದು, ತಕ್ಷಣ ಆಸ್ಪತ್ರೆಗೆ ಕೊಂಡೊಯ್ಯುವ ಮಾರ್ಗ ಮಧ್ಯದಲ್ಲಿ ಮೃತಪಟ್ಟಿದ್ದಾರೆ. ತದ ನಂತರ ಸ್ವಗ್ರಾಮವಾದ ಕೆಲ್ಲೂರಿಗೆ ತಂದು ಅಂತ್ಯಾಸಂಸ್ಕಾರ ನಡೆಸಲಾಯಿತು.