ಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕಿ ಸೋನಯಾ ಗಾಂಧಿ ಬಗ್ಗೆ ಅವಹೇಳನಕಾರಿ ಹಾಗೂ ಅಸಂಸದೀಯ ಪದಗಳನ್ನು ಕೀಳು ಮನಸ್ಥಿತಿಯಿಂದ ಬಳಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತನಾಳ್ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವ ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್‌ನಿಂದ ನಗರ ಡಿವೈಎಸ್ಪಿಗೆ ಬಿ.ಶರಣ ಬಸವೇಶ್ವರ ಅವರಿಗೆ ದೂರು ನೀಡಿ, ಮನವಿ ಮಾಡಿದೆ.
- ಸೋನಿಯಾ ಗಾಂಧಿ, ರಾಹುಲ್ ಗಾಂಧಿ ಬಗ್ಗೆ ಅವಹೇಳನ, ಅಸಂಸದೀಯ ಪದ ಬಳಸಿದ್ದಕ್ಕೆ ದಿನೇಶ ಶೆಟ್ಟಿ ಆಕ್ರೋಶ - - -
ಕನ್ನಡಪ್ರಭ ವಾರ್ತೆ ದಾವಣಗೆರೆಲೋಕಸಭೆ ಪ್ರತಿಪಕ್ಷ ನಾಯಕ ರಾಹುಲ್ ಗಾಂಧಿ, ಎಐಸಿಸಿ ನಾಯಕಿ ಸೋನಯಾ ಗಾಂಧಿ ಬಗ್ಗೆ ಅವಹೇಳನಕಾರಿ ಹಾಗೂ ಅಸಂಸದೀಯ ಪದಗಳನ್ನು ಕೀಳು ಮನಸ್ಥಿತಿಯಿಂದ ಬಳಸಿದ ವಿಜಯಪುರ ಶಾಸಕ ಬಸನಗೌಡ ಪಾಟೀಲ ಯತನಾಳ್ ವಿರುದ್ಧ ಪ್ರಕರಣ ದಾಖಲಿಸಿ, ಬಂಧಿಸುವ ಕೆಪಿಸಿಸಿ ಹಾಗೂ ಜಿಲ್ಲಾ ಕಾಂಗ್ರೆಸ್‌ನಿಂದ ನಗರ ಡಿವೈಎಸ್ಪಿಗೆ ಬಿ.ಶರಣ ಬಸವೇಶ್ವರ ಅವರಿಗೆ ದೂರು ನೀಡಿ, ಮನವಿ ಮಾಡಿದೆ.
ನಗರದ ಡಿವೈಎಸ್ಪಿ ಕಚೇರಿಯಲ್ಲಿ ಪೊಲೀಸ್ ಉಪಾಧೀಕ್ಷಕ ಬಿ.ಶರಣ ಬಸವೇಶ್ವರ ಅವರಿಗೆ ಕೆಪಿಸಿಸಿ ರಾಜ್ಯ ವಕ್ತಾರ, ದೂಡಾ ಅಧ್ಯಕ್ಷ ದಿನೇಶ ಕೆ. ಶೆಟ್ಟಿ, ಜಿಲ್ಲಾ ಕಾರ್ಯದರ್ಶಿ ಎ.ನಾಗರಾಜ, ದಕ್ಷಿಣ ಅಧ್ಯಕ್ಷ ಅಯೂಬ್ ಪೈಲ್ವಾನ್ ಇತರರ ನೇತೃತ್ವದಲ್ಲಿ ಮನವಿ ಅರ್ಪಿಸಿ, ಬಸನಗೌಡ ಪಾಟೀಲ್ ಯತ್ನಾಳ್ ಬಂಧಿಸಿ, ಕಠಿಣ ಕ್ರಮ ಕೈಗೊಳ್ಳಬೇಕು ಎಂದು ದೂರು ನೀಡಿದ್ದಾರೆ.ಇದೇ ವೇಳೆ ದಿನೇಶ ಕೆ. ಶೆಟ್ಟಿ ಮಾತನಾಡಿ, ಕಾಂಗ್ರೆಸ್ಸಿನ ನಾಯಕರನ್ನು ಪಾಕಿಸ್ತಾನ ಹಾಗೂ ಚೀನಾ ಏಜೆಂಟ್‌ಗಳೆಂದು ಮಾಧ್ಯಮಗಳ ಮುಂದೆ ಹೇಳಿಕೆ ನೀಡಿದ ವಿಜಯಪುರ ಕ್ಷೇತ್ರ ಶಾಸಕ ಬಸನಗೌಡ ಪಾಟೀಲ ಯತ್ನಾಳ್ ಅವರನ್ನು ತಕ್ಷಣ ಬಂಧಿಸಬೇಕು. ಕೆಪಿಸಿಸಿಯಿಂದ ಈಗಾಗಲೇ ಬೆಂಗಳೂರಿನಲ್ಲಿ ಬಸನಗೌಡ ಪಾಟೀಲ ಯತ್ನಾಳ್ ವಿರುದ್ಧ ದೂರು ದಾಖಲಿಸಲಾಗಿದೆ. ದಾವಣಗೆರೆಯಲ್ಲೂ ಯತ್ನಾಳ್ ವಿರುದ್ಧ ದೂರು ದಾಖಲಿಸಿದ್ದೇವೆ ಎಂದರು.
ಬಿಜೆಪಿಯ ಉಚ್ಚಾಟಿತ ಶಾಸಕ ಹಾಗೂ ಕೇಂದ್ರದ ಮಾಜಿ ಸಚಿವರೂ ಆದ ಬಸನಗೌಡ ಪಾಟೀಲ ಯತ್ನಾಳ್ ಹಿಂದುತ್ವದ ಹೆಸರಿನಲ್ಲಿ ಹಾಗೂ ಕೋಮು ಗಲಭೆಗಳನ್ನು ಸೃಷ್ಟಿಸುವ ಹೇಳಿಕೆಗಳನ್ನು ನೀಡುತ್ತಿದ್ದಾರೆ. ಕಾಂಗ್ರೆಸ್ ನಾಯಕರ ಬಗ್ಗೆ ಅವಹೇಳನಕಾರಿ ಹೇಳಿಕೆ ಹಾಗೂ ಆಧಾರರಹಿತ ಆರೋಪ ವಿರುದ್ಧ ತಕ್ಷಣವೇ ಯತ್ನಾಳ್ ವಿರುದ್ಧ ಪ್ರಕರಣ ದಾಖಲಿಸಿ, ತನಿಖೆ ನಡೆಸಬೇಕು. ಸೂಕ್ತ ಕಾನೂನು ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿದರು.ಈ ಸಂದರ್ಭ ಪಾಲಿಕೆ ವಿಪಕ್ಷದ ಮಾಜಿ ಸದಸ್ಯ ಜಿ.ಎಸ್. ಮಂಜುನಾಥ ಗಡಿಗುಡಾಳ್, ಯುವ ಮುಖಂಡ ಮುಜಾಹಿದ್ ಪಾಶ ಇತರರು ಇದ್ದರು.
- - --6ಕೆಡಿವಿಜಿ2: ದಾವಣಗೆರೆಯಲ್ಲಿ ಡಿವೈಎಸ್ಪಿ ಬಿ.ಶರಣ ಬಸವೇಶ್ವರ ಅವರಿಗೆ ಕೆಪಿಸಿಸಿ ವಕ್ತಾರ ದಿನೇಶ ಕೆ.ಶೆಟ್ಟಿ, ಅಯೂಬ್ ಪೈಲ್ವಾನ್, ಜಿ.ಎಸ್.ಮಂಜುನಾಥ ಗಡಿಗುಡಾಳ, ಎ.ನಾಗರಾಜ ಇತರರು ದೂರು ನೀಡಿದರು.