ಮಳೆಯಿಂದ ಹಾನಿಗೀಡಾದ ಬೆಳೆಗಳಿಗೆ ಶೀಘ್ರ ಪರಿಹಾರ ನೀಡಿಕಳೆದೊಂದು ತಿಂಗಳಿನಿಂದ ನಿರಂತರ ಸುರಿಯುತ್ತಿರುವ ಮಳೆಯಿಂದಾಗಿ ಹೊಲಗಳಲ್ಲಿ ನೀರು ನಿಂತು, ಬೆಳೆದ ಪೈರುಗಳು ಕೊಳೆಯುತ್ತಿವೆ. ಈ ಹಿನ್ನೆಲೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ, ಜಿಲ್ಲಾಧಿಕಾರಿ ಜಿ.ಎಂ. ಗಂಗಾಧರಸ್ವಾಮಿ ಬೆಳೆಹಾನಿ ಪ್ರದೇಶಕ್ಕೆ ಶೀಘ್ರ ಭೇಟಿ ನೀಡಬೇಕು. ಸಂಕಷ್ಟಕ್ಕೆ ತುತ್ತಾದ ರೈತರ ನೆರವಿಗೆ ಧಾವಿಸಬೇಕು ಎಂದು ಜಿಲ್ಲಾ ರೈತರ ಒಕ್ಕೂಟ ಅಧ್ಯಕ್ಷ ಬಿ.ಎಂ.ಸತೀಶ ಕೊಳೇನಹಳ್ಳಿ ಒತ್ತಾಯಿಸಿದ್ದಾರೆ.