ಮಾಯಕೊಂಡಕ್ಕೆ 750 ಮನೆ ಮಂಜೂರು: ಬಸವಂತಪ್ಪಮಾಯಕೊಂಡ ವಿಧಾನಸಭಾ ಕ್ಷೇತ್ರದ ನಿರ್ಗತಿಕರು, ಬಡವರಿಗೆ ಸೂರು ಕಲ್ಪಿಸಲು ಸರ್ಕಾರ ಮತ್ತು ವಸತಿ ಸಚಿವರ ಮೇಲೆ ಒತ್ತಡ ಹಾಕಿ, ಬಸವ ವಸತಿ ಹಾಗೂ ಡಾ.ಬಿ.ಆರ್.ಅಂಬೇಡ್ಕರ್ ನಿವಾಸ ಯೋಜನೆಯಡಿ 750 ಮನೆಗಳನ್ನು ಮಂಜೂರು ಮಾಡಿಸಿದ್ದು, ಮನೆಗಳ ಹಂಚಿಕೆ ಪಾರದರ್ಶಕವಾಗಿರುವಂತೆ ಗ್ರಾಪಂ ಅಧಿಕಾರಿಗಳು ನೋಡಿಕೊಳ್ಳಬೇಕು ಎಂದು ಶಾಸಕ ಕೆ.ಎಸ್.ಬಸವಂತಪ್ಪ ಎಚ್ಚರಿಸಿದ್ದಾರೆ.