ವೀರಶೈವ ಪೀಠಾಚಾರ್ಯರು, ಶಿವಾಚಾರ್ಯರ ಶೃಂಗಕ್ಕೆ ಬನ್ನಿದಶಕಗಳ ನಂತರ ಮಧ್ಯ ಕರ್ನಾಟಕದ ದಾವಣಗೆರೆಯಲ್ಲಿ ವೀರಶೈವ ಪೀಠಾಚಾರ್ಯರು ಹಾಗೂ ಶಿವಾಚಾರ್ಯ ಶೃಂಗ ಸಮ್ಮೇಳನ ಜು.21 ಮತ್ತು 22ರಂದು ನಡೆಯಲಿದೆ. ರಂಭಾಪುರಿ, ಉಜ್ಜಯಿನಿ, ಕೇದಾರ, ಶ್ರೀಶೈಲ ಹಾಗೂ ಕಾಶಿ ಪೀಠಗಳ ಜಗದ್ಗುರು ಪಾಲ್ಗೊಳ್ಳುವರು ಎಂದು ವೀರಶೈವ ಲಿಂಗಾಯತ ಸಮಾಜದ ನಾಯಕ, ಗಣಿ ಮತ್ತು ಭೂ ವಿಜ್ಞಾನ, ತೋಟಗಾರಿಕೆ ಸಚಿವ ಎಸ್.ಎಸ್.ಮಲ್ಲಿಕಾರ್ಜುನ ತಿಳಿಸಿದ್ದಾರೆ.