ಬಾಬಾ ಸಾಹೇಬ್ ಅಂಬೇಡ್ಕರ್ ಪ್ರತಿಯೊಬ್ಬರಿಗೂ ಸ್ಫೂರ್ತಿದಾವಣಗೆರೆ: ಬಾಲ್ಯದಲ್ಲಿ ಕಂಡುಂಡ ನೋವು, ಸಂಕಷ್ಟ, ಸವಾಲು, ಅವಮಾನಗಳೇ ಭವಿಷ್ಯದಲ್ಲಿ ಬಾಬಾ ಸಾಹೇಬ್ ಅಂಬೇಡ್ಕರ್ ಇಡೀ ದೇಶಕ್ಕೆ ಬೆಳಕು ನೀಡುವ ಪ್ರಖರ ಸೂರ್ಯನಾಗಿ ಹೊರ ಹೊಮ್ಮಲು ಕಾರಣವಾಯಿತು ಎಂದು ಜಿಲ್ಲಾ ವರದಿಗಾರರ ಕೂಟದ ಅಧ್ಯಕ್ಷ, ಕನ್ನಡಪ್ರಭ ಹಿರಿಯ ಪ್ರಧಾನ ವರದಿಗಾರ ನಾಗರಾಜ ಎಸ್.ಬಡದಾಳ್ ತಿಳಿಸಿದರು.